ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ: ಬೈಕ್‌ ರ‍್ಯಾಲಿಗೆ ಉಪರಾಷ್ಟ್ರಪತಿ ಚಾಲನೆ

Last Updated 3 ಆಗಸ್ಟ್ 2022, 10:59 IST
ಅಕ್ಷರ ಗಾತ್ರ

ನವದೆಹಲಿ: 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ 'ಹರ್ ಘರ್ ತಿರಂಗಾ'(ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ) ಕಾರ್ಯಕ್ರಮ ಆಯೋಜಿಸಿದ್ದು ಈ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಬೈಕ್ ರ‍್ಯಾಲಿಗೆ ಚಾಲನೆ ನೀಡಿದರು.

‘ಹರ್ ಘರ್ ತಿರಂಗಾ‘ ಕಾರ್ಯಕ್ರಮದ ಅಂಗವಾಗಿ ಇಲ್ಲಿನ ಕೆಂಪುಕೋಟೆಯಿಂದ ವಿಜಯ್ ಚೌಕ್‌ವರೆಗೂ ಬೈಕ್‌ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವ‘ಹರ್ ಘರ್ ತಿರಂಗಾ‘ ಅಭಿಯಾನ ಆಚರಿಸುವಂತೆ ಕರೆ ಕೊಟ್ಟರು.ಆಗಸ್ಟ್ 13 ಮತ್ತು 15ರ ನಡುವೆ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವಂತೆ ಅವರು ದೇಶದ ಜನರಲ್ಲಿ ಮನವಿ ಮಾಡಿದರು.

ಕೇಂದ್ರ ಸಂಸ್ಕೃತಿ ಸಚಿವಾಲಯತ್ರಿವರ್ಣ ಬೈಕ್ ರ‍್ಯಾಲಿ ಆಯೋಜನೆ ಮಾಡಿತ್ತು. ಇದರಲ್ಲಿ ಸಂಸದರು, ಕೇಂದ್ರ ಸಚಿವರು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಸಾವಿರಾರು ಜನ ನಾಗರೀಕರು ತಮ್ಮ ಬೈಕ್‌ಗಳಲ್ಲಿತ್ರಿವರ್ಣ ಧ್ವಜವನ್ನಿರಿಸಿ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT