ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ: ವೆಂಕಯ್ಯ ನಾಯ್ಡು ಗೌರವ ನಮನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರದ ಮಾಜಿ ಸಚಿವೆ, ದಿವಂಗತ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಗೌರವ ನಮನ ಸಲ್ಲಿಸಿದ್ದಾರೆ. ಇದೇ ವೇಳೆ, ‘ಸುಷ್ಮಾ ಅವರು ರಾಷ್ಟ್ರಕ್ಕೆ ಸಲ್ಲಿಸಿರುವ ನಿಸ್ವಾರ್ಥ ಸೇವೆಯನ್ನು ಸದಾ ಸ್ಮರಿಸುತ್ತೇವೆ‘ ಎಂದು ಹೇಳಿದ್ದಾರೆ. 

‘ಇಂದು ಪ್ರೀತಿಯ ಸಹೋದರಿ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆ. ಅವರೊಬ್ಬ ಅತ್ಯುತ್ತಮ ಸಂಸದೀಯ ಪಟು ಮತ್ತು ಉತ್ತಮ ವಾಗ್ಮಿ. ಮಹಿಳೆಯರು ಮತ್ತು ದೀನ ದಲಿತರ ವರ್ಗದ ಸಬಲೀಕರಣಕ್ಕಾಗಿ ಅಹರ್ನಿಶವಾಗಿ ಸೇವೆ ಸಲ್ಲಿಸಿದ ವ್ಯಕ್ತಿ‘ ಎಂದು ವೆಂಕಯ್ಯನಾಯ್ಡು ಅವರು ಟ್ವೀಟ್‌ ಮಾಡಿದ್ದಾರೆ.

‘ಎಲ್ಲ ಕ್ಷೇತ್ರಗಳ ಜನರ ಬಗ್ಗೆಯೂ ಸಹಾನಭೂತಿ ಹೊಂದಿದ್ದ, ದೇಶ ಸೇವೆಗೆ ಸಮರ್ಪಿಸಿಕೊಂಡಿದ್ದ ಧೀಮಂತ ನಾಯಕಿ ಸುಷ್ಮಾ ಸ್ವರಾಜ್. ಅವರ ನಿಸ್ವಾರ್ಥ ಸೇವೆಯನ್ನು ಸದಾ ಸ್ಮರಿಸುತ್ತೇವೆ‘ ಎಂದು ನಾಯ್ಡು ಟ್ವೀಟ್‌ ಮಾಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು