ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡುಗೆ ಕೊರೊನಾ ಸೋಂಕು ದೃಢ

Last Updated 30 ಸೆಪ್ಟೆಂಬರ್ 2020, 6:13 IST
ಅಕ್ಷರ ಗಾತ್ರ

ನವದೆಹಲಿ: ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ಮಂಗಳವಾರ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ವಿಚಾರವನ್ನು ಉಪರಾಷ್ಟ್ರಪತಿಗಳ ಸಚಿವಾಲಯ ಸ್ಪಷ್ಟಪಡಿಸಿದೆ.

ಕೋವಿಡ್ ರೋಗಲಕ್ಷಣವಿಲ್ಲದ 71 ವರ್ಷದ ನಾಯ್ಡು ಅವರು ಹೋಂ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಉಪರಾಷ್ಟ್ರಪತಿಗಳ ಸಚಿವಾಲಯ, ಉಪರಾಷ್ಟ್ರಪತಿಗಳು ಮಂಗಳವಾರ ಬೆಳಗ್ಗೆ ನಿಯಮಿತ ಕೋವಿಡ್‌-19 ಪರೀಕ್ಷೆಗೊಳಪಟ್ಟಿದ್ದರು. ಈ ವೇಳೆ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರಿಗೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲ ಮತ್ತು ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದೆ.

ಅಲ್ಲದೆ ಪತ್ನಿ ಉಷಾ ನಾಯ್ಡು ಅವರಿಗೆ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದು, ಪ್ರತ್ಯೇಕವಾಗಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚಿನ ದಿನಗಳಲ್ಲಿ ಹಲವಾರು ಕೇಂದ್ರ ಸಚಿವರಿಗೆ ಕೋವಿಡ್-19 ಸೋಂಕು ತಗುಲಿದ್ದು, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT