ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್‌ಗೆ ಗೆಲುವು

ನವದೆಹಲಿ: ಇಂದು ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಗೆಲುವು ಸಾಧಿಸಿದ್ದಾರೆ.
ದೆಹಲಿಯ ಸಂಸತ್ ಭವನದಲ್ಲಿ ಇಂದು ಬೆಳಿಗ್ಗೆ 10 ಗಂಟೆಯಿಂದ 5 ಗಂಟೆವರೆಗೆ ಚುನಾವಣೆ ನಡೆದಿದ್ದು, ನಂತರ ಮತ ಎಣಿಕೆ ನಡೆಸಲಾಯಿತು.
ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಒಟ್ಟು 780 ಸಂಸದರಿದ್ದು, 725 ಮಂದಿ ಮತದಾನ ಮಾಡಿದ್ದರು.
ಒಟ್ಟು ಚಲಾವಣೆಯಾದ 725 ಮತಗಳ ಪೈಕಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ 528 ಮತಗಳನ್ನು ಪಡೆದಿದ್ದಾರೆ. ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವಾ 182 ಮತಗಳನ್ನು ಪಡೆದಿದ್ದಾರೆ.
ಇದರೊಂದಿಗೆ ಧನಕರ್ ಅವರು 346 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. 15 ಮತಗಳನ್ನು ಅಸಿಂಧು ಎಂದು ಘೋಷಿಸಲಾಗಿದೆ ಎಂದು ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ರಾಜ್ಯಸಭೆ ಚುನಾಯಿತ ಮತ್ತು ನಾಮನಿರ್ದೇಶಿತ ಸದಸ್ಯರು ಹಾಗೂ ಲೋಕಸಭೆ ಚುನಾಯಿತ ಸದಸ್ಯರನ್ನು ಒಳಗೊಂಡಂತೆ 780 ಮತದಾರರಲ್ಲಿ 725 ಮತದಾರರು ತಮ್ಮ ಮತ ಚಲಾಯಿಸಿದ್ದಾರೆ. ಶೇ 92.94ರಷ್ಟು ಮತದಾನವಾಗಿದೆ ಎಂದು ಉತ್ಪಲ್ ಕುಮಾರ್ ಸಿಂಗ್ ಹೇಳಿದ್ದಾರೆ.
ಈ ಮೂಲಕ ಜಗದೀಪ್ ಧನಕರ್ ಅವರು ಭಾರತದ 14ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
NDA candidate Jagdeep Dhankar declared the Vice President of India pic.twitter.com/SwxtHArqxK
— ANI (@ANI) August 6, 2022
Delhi | NDA candidate Jagdeep Dhankar won by 346 votes as he bagged 528 of the total 725 votes that were cast. While 15 were termed invalid, Opposition candidate Margret Alva received 182 votes in the election: LS Gen-Secy Utpal K Singh pic.twitter.com/ZNHcbmftAU
— ANI (@ANI) August 6, 2022
#VicePresidentialElections2022 | Out of 780 electors comprising elected & nominated members of the RS & elected members of LS, 725 electors cast their votes. Total voter turnout - 92.94%: Utpal Kumar Singh, Lok Sabha Secretary-General pic.twitter.com/29xjxnkbXJ
— ANI (@ANI) August 6, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.