ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಯ್ದೆಗಳನ್ನು ಹಿಂಪಡೆವ ನಿರ್ಧಾರ: ಅನ್ಯಾಯದ ವಿರುದ್ಧದ ಜಯ– ರಾಹುಲ್ ಗಾಂಧಿ

Last Updated 19 ನವೆಂಬರ್ 2021, 5:38 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಅನ್ನದಾತರು ತಮ್ಮ ಸತ್ಯಾಗ್ರಹದ ಮೂಲಕ ಗರ್ವದ ತಲೆ ತಗ್ಗಿಸುವಂತೆ ಮಾಡಿದ್ದಾರೆ ಎಂದು ಮೂರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿರ್ಧಾರದ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಇದು ‘ಅನ್ಯಾಯದ ವಿರುದ್ಧದ ಜಯ’ ಎಂದು ಅವರು ಬಣ್ಣಿಸಿದ್ದಾರೆ.

‘ದೇಶದ ಅನ್ನದಾತರು ತಮ್ಮ ಸತ್ಯಾಗ್ರಹದ ಮೂಲಕ ಗರ್ವದ ತಲೆ ತಗ್ಗಿಸುವಂತೆ ಮಾಡಿದ್ದಾರೆ’ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

‘ಅನ್ಯಾಯದ ವಿರುದ್ಧದ ಈ ಜಯಕ್ಕೆ ಅಭಿನಂದನೆಗಳು. ಜೈ ಹಿಂದ್ ’ಎಂದು ಅವರು ಹೇಳಿದ್ದಾರೆ

ಮೂರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನವೆಂಬರ್ 2020ರಿಂದ ರೈತರು ದೆಹಲಿಯ ಗಡಿಗಳಲ್ಲಿ ನಿರಂತರ ಹೋರಾಟ ನಡೆಸಿದ್ದರು. ಸರ್ಕಾರದ ಜೊತೆ ನಡೆದ 11 ಸುತ್ತಿನ ಸಂಧಾನ ಮಾತುಕತೆಗಳು ವಿಫಲವಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT