ಶನಿವಾರ, ಅಕ್ಟೋಬರ್ 1, 2022
23 °C

ವಿಡಿಯೊ: ಪೊಲೀಸ್‌ ಠಾಣೆಯೊಳಗೆ ಹೆಡ್‌ ಕಾನ್‌ಸ್ಟೆಬಲ್‌ ಮೇಲೆ ಯುವಕರಿಂದ ಹಲ್ಲೆ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಇಲ್ಲಿನ ಆನಂದ್‌ ವಿಹಾರ್‌ ಪೊಲೀಸ್ ಠಾಣೆಯ ಒಳಗೆ ಹೆಡ್‌ ಕಾನ್‌ಸ್ಟೆಬಲ್‌ ಅಪರಿಚಿತರ ಗುಂಪು ಹಲ್ಲೆ ಮಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಈ ಘಟನೆ ಆಗಸ್ಟ್‌ 3ರಂದು ನಡೆದಿದೆ. 10–12 ಜನರಿದ್ದ ಗುಂಪಿನಲ್ಲಿ ಯುವಕನೊಬ್ಬ ಹೆಡ್‌ ಕಾನ್‌ಸ್ಟೆಬಲ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಠಾಣೆಯಲ್ಲಿ ಇದ್ದವರು ಯಾರೂ ಕೂಡ ಸಹಾಯಕ್ಕೆ ಬಂದಿಲ್ಲ, ಅವರು ತಮ್ಮ ಮೊಬೈಲ್‌ ಫೋನ್‌ನಲ್ಲಿ ಹಲ್ಲೆ ಮಾಡುವುದನ್ನು ವಿಡಿಯೊ ಮಾಡುತ್ತಿದ್ದರು. 

ಇದೇ ಠಾಣೆಯ ಕಾನ್‌ಸ್ಟೆಬಲ್‌ವೊಬ್ಬರು ವಿಡಿಯೊ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದಾರೆ. ಹಲವು ಸಲ ಹೆಡ್‌ ಕಾನ್‌ಸ್ಟೆಬಲ್‌ ಕ್ಷಮೆ ಕೇಳಿದರೂ ಯುವಕರು ಥಳಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. 

ಹೆಡ್‌ ಕಾನ್‌ಸ್ಟೆಬಲ್‌ ಮೇಲೆ ಯಾಕೆ ಹಲ್ಲೆ ಮಾಡಲಾಯಿತು ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಈ ಘಟನೆ ಬಗ್ಗೆ ಹಿರಿಯ ಪೊಲೀಸ್‌ ಅಧಿಕಾರಿಗಳು ತನಿಖೆಗೆ ಆದೇಶ ಮಾಡಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು