ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣದಲ್ಲಿ ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್?: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Last Updated 24 ಮಾರ್ಚ್ 2023, 3:51 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್‌ನ ಸಿಖ್‌ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತಪಾಲ್‌ ಸಿಂಗ್‌, ಹರಿಯಾಣದಲ್ಲಿ ತಲೆಮರೆಸಿಕೊಂಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಹರಿಯಾಣದ ಕುರುಕ್ಷೇತ್ರದಲ್ಲಿ ಅಮೃತಪಾಲ್‌ ಸಿಂಗ್‌ ತನ್ನ ಮುಖವನ್ನು ಮರೆಮಾಚಲು ಛತ್ರಿ ಹಿಡಿದುಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪೊಲೀಸರಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾಗ ಅಮೃತಪಾಲ್‌ ಸಿಂಗ್‌ಗೆ ಮಹಿಳೆಯೊಬ್ಬರು ಮನೆಯಲ್ಲಿ ಆಶ್ರಯ ನೀಡಿದ್ದರು. ಸ್ವಲ್ಪ ಸಮಯದ ಬಳಿಕ ಅಮೃತಪಾಲ್‌ ಮನೆಯಿಂದ ಹೊರಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಮೃತಪಾಲ್‌ ಸಿಂಗ್‌ ಮತ್ತು ಆತನ ಸಹಚರ ಪಾಪಲ್‌ಪ್ರೀತ್‌ ಸಿಂಗ್‌ಗೆ ಕುರುಕ್ಷೇತ್ರ ಜಿಲ್ಲೆಯ ತನ್ನ ಮನೆಯಲ್ಲಿ ಆಶ್ರಯ ನೀಡಿದ ಆರೋಪದ ಮೇರೆಗೆ ಬಲ್ಜಿತ್‌ ಕೌರ್‌ ಎಂಬ ಮಹಿಳೆಯನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.

ಕುರುಕ್ಷೇತ್ರ ಜಿಲ್ಲೆಯ ಶಹಾಬಾದ್‌ನಿಂದ ಮಹಿಳೆಯನ್ನು ಬಂಧಿಸಲಾಗಿದ್ದು, ಅವರನ್ನು ಪಂಜಾಬ್‌ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಕುರುಕ್ಷೇತ್ರದ ಪೊಲೀಸ್ ವರಿಷ್ಠಾಧಿಕಾರಿ ಸುರೀಂದರ್ ಸಿಂಗ್ ಭೋರಿಯಾ ಮಾಹಿತಿ ನೀಡಿದ್ದಾರೆ.

ಬಂಧಿತ ಮಹಿಳೆ ಮತ್ತು ಪಾಪಲ್‌ಪ್ರೀತ್‌ ಸಿಂಗ್‌ ಎರಡು ವರ್ಷಗಳಿಂದ ಪರಿಚಿತರಾಗಿದ್ದರು. ಬೈಕ್‌, ಕಾರು, ಎಸ್‌ಯುವಿಗಳ ಮೂಲಕ ತಪ್ಪಿಸಿಕೊಂಡಿರುವ ಪಾಪಲ್‌ಪ್ರೀತ್‌ ಸಿಂಗ್‌ ಮತ್ತು ಅಮೃತಪಾಲ್‌ ಸಿಂಗ್‌ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಸುರೀಂದರ್ ಸಿಂಗ್ ಹೇಳಿದ್ದಾರೆ.

ಮನೆಯಿಂದ ಹೊರಟ ಅಮೃತ್‌ಪಾಲ್‌ ತನ್ನ ಮುಖ ಮರೆಮಾಚಲು ಛತ್ರಿಯನ್ನು ಹಿಡಿದುಕೊಂಡು ಹೋಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ ಅಮೃತ್‌ಪಾಲ್‌ ಸಿಂಗ್ ಬಂಧಿನಕ್ಕೆ ಪಂಜಾಬ್‌ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT