ಅಹಮದಾಬಾದ್: ಅಹಮದಾಬಾದ್‌ನ ವಸ್ತ್ರಾಪುರ ಪ್ರದೇಶದ ಲೇಕ್ ಗಾರ್ಡನ್‌ನಲ್ಲಿ ಕೆಲವು ಮುಸ್ಲಿಮರು ನಮಾಜ್ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕಾರ್ಯಕರ್ತರು ಪ್ರದೇಶದಲ್ಲಿ ಶುದ್ಧೀಕರಣ ನಡೆಸಿರುವ ಘಟನೆ ವರದಿಯಾಗಿದೆ.
ಕೆಲವು ದಿನಗಳ ಹಿಂದೆ, ವಸ್ತ್ರಾಪುರ ಲೇಕ್ ಗಾರ್ಡನ್‌ನಲ್ಲಿ ಮಹಿಳೆಯರು ಸೇರಿದಂತೆ ಆರು ಮಂದಿ ಮುಸ್ಲಿಮರು ನಮಾಜ್ ನಡೆಸಿದ್ದರು ಎನ್ನಲಾಗಿದೆ. ಪ್ರಸ್ತುತ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಮತ್ತು ಶುದ್ಧೀಕರಣಕ್ಕೆ ಸಂಬಂಧಿಸಿದಂತೆ ಯಾರೂ ಸಂಪರ್ಕಿಸಿಲ್ಲ ಎಂದು ವಸ್ತ್ರಾಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಂದೀಪ್ ಖಂಬ್ಲಾ ತಿಳಿಸಿದ್ದಾರೆ.
ಕೆರೆಯ ಸಮೀಪವಿರುವ ಬಹುಮಹಡಿ ಕಟ್ಟಡದ ನಿವಾಸಿಯೊಬ್ಬರು ಈ ವಿಡಿಯೊವನ್ನು ಚಿತ್ರೀಕರಿಸಿರಬಹುದು ಎನ್ನಲಾಗಿದೆ. ಬಳಿಕ ಸ್ಥಳಕ್ಕೆ ಆಗಮಿಸಿರುವ ವಿಎಚ್‌ಪಿ ಕಾರ್ಯಕರ್ತರು ಮಂತ್ರಗಳನ್ನು ಪಠಿಸಿ ಗಂಗಾಜಲವನ್ನು ಸಿಂಪಡಿಸಿ ಶುದ್ಧೀಕರಣ ನಡೆಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.