ನವದೆಹಲಿ: ಸರ್ಕಾರಕ್ಕಿಂತ ಭಿನ್ನವಾದ ಅಭಿಪ್ರಾಯ ಹೊಂದಿರುವುದು ಮತ್ತು ಸರ್ಕಾರದ ಜತೆಗಿನ ಭಿನ್ನಾಭಿಪ್ರಾಯವನ್ನು ದೇಶದ್ರೋಹ ಎನ್ನಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಜಮ್ಮು–ಕಾಶ್ಮೀರದ ವಿಶೇಷ ಸ್ಥಾನಮಾನಕ್ಕೆ ಸಂಬಂಧಿಸಿದ ಸಂವಿಧಾನದ 370ನೇ ವಿಧಿಯ ರದ್ದತಿ ಬಗ್ಗೆ ರಾಜ್ಯದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ.

ಓದಿ:ಸಂವಿಧಾನದ 370ನೇ ವಿಧಿ ಮತ್ತು ‘35–ಎ’ ಕಲಂ ಸಮಗ್ರ ಮಾಹಿತಿ

370ನೇ ವಿಧಿಯ ಮರುಸ್ಥಾಪನೆಗೆ ಅಬ್ದುಲ್ಲಾ ಅವರು ಪಾಕಿಸ್ತಾನ ಹಾಗೂ ಚೀನಾದ ಸಹಾಯ ಕೋರಿದ್ದರು ಎಂದೂ ಅರ್ಜಿದಾರ ರಜತ್ ಶರ್ಮಾ ಆರೋಪಿಸಿದ್ದರು. ಇದನ್ನು ಸಾಬೀತುಪಡಿಸಲು ವಿಫಲರಾದ ಕಾರಣ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹಾಗೂ ಹೇಮಂತ್ ಗುಪ್ತಾ ಅವರಿದ್ದ ನ್ಯಾಯಪೀಠವು ಅರ್ಜಿದಾರರಿಗೆ ₹50,000 ದಂಡ ವಿಧಿಸಿದೆ.

2019ರ ಆಗಸ್ಟ್ 5ರಂದು ಕೇಂದ್ರ ಸರ್ಕಾರವು ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿತ್ತು. 2019ರ ಅಕ್ಟೋಬರ್ 31ರಿಂದ ಜಾರಿಗೆ ಬರುವಂತೆ ಜಮ್ಮು–ಕಾಶ್ಮೀರ ಹಾಗೂ ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.