ಬುಧವಾರ, ಏಪ್ರಿಲ್ 14, 2021
23 °C

ಮಲ್ಯ, ಚೋಕ್ಸಿ, ನೀರವ್ ಮೋದಿಯನ್ನು ದೇಶದ ಕಾನೂನಿನ ಮುಂದೆ ತರುತ್ತೇವೆ: ನಿರ್ಮಲಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ರಾಜ್ಯಸಭೆ: ದೇಶಬಿಟ್ಟು ಪರಾರಿಯಾಗಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಅವರು ಕಾನೂನನ್ನು ಎದುರಿಸಲು ಭಾರತಕ್ಕೆ ಹಿಂದಿರುಗಲಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.

ವಿಜಯ್ ಮಲ್ಯ ಮತ್ತು ನೀರವ್ ಮೋದಿಯನ್ನು ಬ್ರಿಟನ್‌ನಿಂದ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಚೋಕ್ಸಿ ಆಂಟಿಗುವಾದಲ್ಲಿದ್ದಾರೆ ಎಂದು ನಂಬಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ಎಲ್ಲರೂ ಹಣಕಾಸು ವಂಚನೆ ಆರೋಪಗಳ ಕುರಿತಂತೆ ದೇಶದ ಕಾನೂನನ್ನು ಎದುರಿಸಲು ಹಿಂತಿರುಗಲಿದ್ದಾರೆ ಎಂದು ರಾಜ್ಯಸಭೆಯಲ್ಲಿ ವಿಮಾ ತಿದ್ದುಪಡಿ ಮಸೂದೆ ಮೇಲಿನ ಚರ್ಚೆ ವೇಳೆ ಉತ್ತರಿಸುವಾಗ ನಿರ್ಮಲಾ ಸೀತಾರಾಮನ್ ಹೇಳಿದರು.

ತನ್ನ ನಿಷ್ಕ್ರಿಯ ಕಿಂಗ್‌ಫಿಶರ್ ಏರ್‌ಲೈನ್ಸ್ ಪಡೆದಿದ್ದ ₹ 9,000 ಕೋಟಿ ಬ್ಯಾಂಕ್ ಸಾಲದ ಸುಸ್ತಿದಾರರಾಗಿರುವ ಆರೋಪಿ ವಿಜಯ್ ಮಲ್ಯ 2016 ರ ಮಾರ್ಚ್‌ನಿಂದ ಬ್ರಿಟನ್ನಿನಲ್ಲಿದ್ದಾರೆ.

ನೀರವ್ ಮೋದಿ ಮತ್ತು ಅವರ ಮಾವ ಚೋಕ್ಸಿ ಸಾರ್ವಜನಿಕ ವಲಯದ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಮಾಡಿದ ಆರೋಪ ಕೇಳಿ ಬಂದ ಬಳಿಕ ದೇಶಬಿಟ್ಟು ಪರಾರಿಯಾಗಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ನೀರವ್ ಮೋದಿ ಸುಮಾರು ₹ 14,500 ಕೋಟಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು