ಭಾನುವಾರ, ಮೇ 29, 2022
30 °C

ಉತ್ತರ ಪ್ರದೇಶದಲ್ಲಿ ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕರನ್ನು ಓಡಿಸಿದ ಗ್ರಾಮಸ್ಥರು

ಪಿಟಿಐ Updated:

ಅಕ್ಷರ ಗಾತ್ರ : | |

credit: Screengrab of video on Twitter/@KisanEktaManch

ಲಖನೌ: ವಿಧಾನಸಭಾ ಚುನಾವಣೆಗೆ ಸಜ್ಜಾದ ಉತ್ತರ ಪ್ರದೇಶದಲ್ಲಿ ಪ್ರಚಾರ ಕಾರ್ಯಕ್ಕೆ ತೆರಳಿದ್ದ ಬಿಜೆಪಿ ಶಾಸಕರೊಬ್ಬರನ್ನು ಗ್ರಾಮಸ್ಥರು ಬೆನ್ನಟ್ಟಿದ್ದಾರೆ.

ಶಾಸಕ ವಿಕ್ರಮ್ ಸೈನಿ ಅವರು ಮುನ್ವಾರ್‌ಪುರ್ ಗ್ರಾಮಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಉದ್ರಿಕ್ತ ಗ್ರಾಮಸ್ಥರು ಶಾಸಕರನ್ನು ತಡೆದು ವಾಪಸ್ ಹೋಗುವಂತೆ ಹೇಳಿದ್ದಾರೆ.

ಗ್ರಾಮಸ್ಥರ ಪ್ರತಿರೋಧ ಎದುರಿಸಿದ ಶಾಸಕರು, ಬೇರೆ ಆಯ್ಕೆಯಿಲ್ಲದೇ ಕಾರು ಹತ್ತಿ ವಾಪಸ್ ಹೋಗಿದ್ದಾರೆ.

ಈ ಕುರಿತ ವಿಡಿಯೊವನ್ನು ಕಿಸಾನ್ ಏಕತಾ ಮಂಚ್ ಟ್ವೀಟ್ ಮಾಡಿದ್ದು, ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿರುವ ಶಾಸಕ ಸೈನಿ, ಗ್ರಾಮಸ್ಥರ ಪೈಕಿ ಕೆಲವರು ಮದ್ಯದ ಅಮಲಿನಲ್ಲಿದ್ದರು. ಹೀಗಾಗಿ ಭೇಟಿಗೆ ಪ್ರತಿರೋಧ ವ್ಯಕ್ತಪಡಿಸಿದ್ದರು. ಆದ್ದರಿಂದ ವಾಪಸ್ ಬಂದಿರುವುದಾಗಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು