ವಿನಯ್ ಕುಮಾರ್ ಸಕ್ಸೇನಾ ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್

ನವದೆಹಲಿ: ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ಅವರನ್ನು ಸೋಮವಾರ ನೇಮಕ ಮಾಡಲಾಗಿದೆ.
ವಿನಯ್ ಕುಮಾರ್ ಅವರು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ಅಧ್ಯಕ್ಷರಾಗಿದ್ದಾರೆ.
ಅನಿಲ್ ಬೈಜಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ್ದಾರೆ. 2016ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಲೆಫ್ಟಿನಂಟ್ ಗವರ್ನರ್ ಆಗಿ ಐಎಎಸ್ ನಿವೃತ್ತಿ ಅಧಿಕಾರಿ ಅನಿಲ್ ಬೈಜಲ್ ಅವರನ್ನು ನೇಮಕ ಮಾಡಲಾಗಿತ್ತು.
ಇದನ್ನೂ ಓದಿ–ತೈವಾನ್ ಆಕ್ರಮಿಸಲು ಚೀನಾದ 1.4 ಲಕ್ಷ ಯೋಧರು, 953 ಹಡಗು ಸಜ್ಜು–ಆಡಿಯೊ ಸೋರಿಕೆ
ದೆಹಲಿಯ ರಾಷ್ಟ್ರ ರಾಜಧಾನಿ ವಲಯದ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ಅವರನ್ನು ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೇಮಕ ಮಾಡಿರುವ ಬಗ್ಗೆ ರಾಷ್ಟ್ರಪತಿ ಭವನದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.