ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಸಕ್ಸೇನಾ ಪ್ರಮಾಣವಚನ

ನವದೆಹಲಿ: ವಿನಯ್ ಕುಮಾರ್ ಸಕ್ಸೇನಾ ಅವರು ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.
ಈ ಹಿಂದಿನ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ವೈಯಕ್ತಿಕ ಕಾರಣಕ್ಕೆ ಕೆಲ ದಿನಗಳ ಹಿಂದಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಸಕ್ಸೇನಾ ಅವರು ಕೇಂದ್ರ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಮುಖ್ಯಸ್ಥರಾಗಿದ್ದರು.
ವಿನಯ್ ಕುಮಾರ್ ಅವರನ್ನು ರಾಷ್ಟ್ರ ರಾಜಧಾನಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಳಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇತ್ತೀಚೆಗೆ ಪ್ರಕಟಣೆ ಹೊರಡಿಸಿದ್ದರು.
2016ರಲ್ಲಿ ನಜೀಬ್ ಜಂಗ್ ಅವರ ರಾಜೀನಾಮೆ ಬಳಿಕ ಅನಿಲ್ ಬೈಜಾಲ್ ಅವರು ಲೆಫ್ಟಿನೆಂಟ್ ಗವರ್ನರ್ ಹುದ್ದೆಯನ್ನು ಅಲಂಕರಿಸಿದ್ದರು.
Delhi | Vinai Kumar Saxena takes oath as Lieutenant Governor of Delhi pic.twitter.com/cDEYu7uMIB
— ANI (@ANI) May 26, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.