ಮಂಗಳವಾರ, ಜೂನ್ 22, 2021
27 °C

ಬಿಜೆಪಿ ಗೆದ್ದ ಪ್ರದೇಶಗಳಲ್ಲಿ ಹಿಂಸಾಚಾರ ನಡೆಯುತ್ತಿದೆ: ಮಮತಾ ಬ್ಯಾನರ್ಜಿ

ಪಿಟಿಐ‌ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ಪ್ರದೇಶಗಳಲ್ಲಿ ಹಿಂಸಾಚಾರ ಹಾಗೂ ಘರ್ಷಣೆಗಳು ನಡೆಯುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಆರೋಪಿಸಿದ್ದಾರೆ.

ಮೂರನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚಣ ಸ್ವೀಕರಿಸಿದ ಮಮತಾ, ಹಿಂಸಾಚಾರದ ಹಳೆಯ ಹಾಗೂ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿ ಚುನಾವಣೆಯಲ್ಲಿ ಗೆದ್ದ ಪ್ರದೇಶಗಳಲ್ಲಿ ಹಿಂಸಾಚಾರ ಮತ್ತು ಘರ್ಷಣೆಗಳನ್ನು ನಡೆಯುತ್ತಿರುವುದನ್ನು ನಾನು ಗಮನಿಸಿದ್ದೇನೆ. ಈ ಎಲ್ಲ ಹಿಂಸಾಚಾರ ಘಟನೆಗಳು ನಡೆದಾಗ ಕಾನೂನು ಸುವ್ಯವಸ್ಥೆಯು ಚುನಾವಣಾ ಆಯೋಗದ ಅಧೀನತೆಯಲ್ಲಿತ್ತು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: 

ಕಳೆದ ಮೂರು ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದೆಗಟ್ಟಿದೆ. ಅಲ್ಲಲ್ಲಿ ಕೆಲವು ಘಟನೆಗಳು ನಡೆದಿವೆ. ಆದರೆ ಎಲ್ಲವೂ ನಿಜವಲ್ಲ. ಹೆಚ್ಚಿನವು ನಕಲಿಯಾಗಿದ್ದು, ಬಿಜೆಪಿಯು ಹಳೆಯ ವಿಡಿಯೊಗಳನ್ನು ಹಂಚುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನು ನಿಲ್ಲಿಸುವಂತೆ ನಾನು ಎಲ್ಲ ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇನೆ. ನೀವು ಚುನಾವಣೆಯಿಂದಲೂ ಜನರನ್ನು ಹಿಂಸಿಸುತ್ತಿದ್ದೀರಿ. ಇದನ್ನು ನಿಲ್ಲಿಸಿ, ಇಲ್ಲವಾದ್ದಲ್ಲಿ ಕಾನೂನು ತನ್ನ ಹಾದಿಯನ್ನು ಹಿಡಿಯಲಿದೆ. ಬಂಗಾಳವು ಶಾಂತಿ ಪರಂಪರೆಯ ನಾಡಾಗಿದ್ದು, ಇಲ್ಲಿ ಪ್ರತಿಯೊಂದು ವರ್ಗದ ಜನರೊಂದಿಗೆ ನಾವು ಶಾಂತಿಯಿಂದ ಇರುತ್ತೇವೆ ಎಂದಿದ್ದಾರೆ.

ಹಿಂಸಾಚಾರದಲ್ಲಿ ಯಾರೇ ಭಾಗಿಯಾಗುವುದನ್ನು ಕಂಡುಬಂದರೆ, ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಯಾವುದೇ ಕಾನೂನು ಬಾಹಿರ ಕೃತ್ಯವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು