ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರಾದ ಹಲವೆಡೆ ಬಿಜೆಪಿ, ಸಿಪಿಐಎಂ ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆ

Last Updated 8 ಸೆಪ್ಟೆಂಬರ್ 2021, 16:08 IST
ಅಕ್ಷರ ಗಾತ್ರ

ಅಗರ್ತಲ: ತ್ರಿಪುರಾದ ಹಲವೆಡೆ ಆಡಳಿತಾರೂಢ ಬಿಜೆಪಿ ಮತ್ತು ಸಿಪಿಐ(ಎಂ) ಕಾರ್ಯಕರ್ತರ ನಡುವೆ ಬುಧವಾರ ಹಿಂಸಾತ್ಮಕ ಘರ್ಷಣೆ ನಡೆದಿದೆ.

ಗೋಮತಿ ಜಿಲ್ಲೆಯ ಉದಯ್‌ಪುರದಲ್ಲಿ ಸಿಪಿಐ(ಎಂ)ನ ಯುವ ಘಟಕ ‘ಡೆಮಾಕ್ರಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್‌ಐ)’ ಮೆರವಣಿಗೆ ಹಮ್ಮಿಕೊಂಡಿತ್ತು. ಮೆರವಣಿಗೆ ವೇಳೆ ಕೆಲವು ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಡಿವೈಎಫ್‌ಐ ಮೆರವಣಿಗೆ ವೇಳೆ ಸಮೀಪದಲ್ಲೇ ಇದ್ದ ಬಿಜೆಪಿ ಕಾರ್ಯಕರ್ತರ ಗುಂಪು ದಾಳಿ ನಡೆಸಿತ್ತು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಆದರೆ ಅವರು ಯಾವ ರಾಜಕೀಯ ಪಕ್ಷಕ್ಕೆ ಸೇರಿದವರು ಎಂಬುದು ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ

ಅಗರ್ತಲ, ವೈಶಾಲ್‌ಗಡ, ಕಥಾಲಿಯಾಗಳಲ್ಲಿ ಸಿಪಿಐ(ಎಂ) ಕಚೇರಿಗಳನ್ನು ಧ್ವಂಸ ಮಾಡಲಾಗಿದ್ದು, ಬೆಂಕಿ ಹಚ್ಚಲಾಗಿದೆ ಎಂದು ಮೂಲಗಳು ಹೇಳಿವೆ.

ತ್ರಿಪುರಾ ಮಾಜಿ ಮುಖ್ಯಮಂತ್ರಿ ಮಣಿಕ್ ಸರ್ಕಾರ್ ಧನ್‌ಪುರಕ್ಕೆ ತೆರಳುತ್ತಿದ್ದಾಗ ಅವರನ್ನು ತಡೆದ ವಿಚಾರವಾಗಿ ಸೋಮವಾರ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿತ್ತು. ಘಟನೆಯಲ್ಲಿ ಗಾಯಗೊಂಡಿದ್ದ ಉದಯ್‌ಪುರದ ಬಿಜೆಪಿ ಕಾರ್ಯಕರ್ತನ ಸ್ಥಿತಿ ತೀರಾ ಗಂಭೀರವಾಗಿದ್ದು, ಜಿ.ಬಿ.ಪಂತ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನಾ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕಷಿ ಸಚಿವ ಪ್ರಾಣ್‌ಜಿತ್ ಸಿಂಗ್ ರಾಯ್ ಸ್ಥಳಕ್ಕೆ ಧಾವಿಸಿದ್ದು ಪರಿಸ್ಥಿತಿ ಅವಲೋಕಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT