ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 12ರ ವರೆಗೂ ಕಾರ್ತಿ ಚಿದಂಬರಂ ಬಂಧಿಸಲ್ಲ: ಇ.ಡಿ

ವೀಸಾ ಹಗರಣ ಸಂಬಂಧ ದೆಹಲಿ ಹೈಕೋರ್ಟ್ ವಿಚಾರಣೆ ವೇಳೆ ಸ್ಪಷ್ಟನೆ
Last Updated 24 ಜೂನ್ 2022, 14:16 IST
ಅಕ್ಷರ ಗಾತ್ರ

ನವದೆಹಲಿ: ವೀಸಾ ಹಗರಣ ಸಂಬಂಧ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ವಿರುದ್ಧ ಜುಲೈ 12ರವರೆಗೆ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿ ಹೈಕೋರ್ಟ್‌ಗೆ ಶುಕ್ರವಾರ ಮೌಖಿಕವಾಗಿ ತಿಳಿಸಿದೆ.

ಪ್ರಕರಣದ ನಿರೀಕ್ಷಣಾ ಜಾಮೀನು ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಸ್ಮೀತ್‌ ಸಿಂಗ್‌ ಅವರು ಜುಲೈ 12ಕ್ಕೆ ವಿಚಾರಣೆಯನ್ನು ಮುಂದೂಡಿದರು.

ಕಾರ್ತಿ ಅವರು ತಮ್ಮ ತಂದೆ ಪಿ.ಚಿದಂಬರಂ ಗೃಹ ಸಚಿವರಾಗಿದ್ದ ಅವಧಿಯಲ್ಲಿ (2011) ಚೀನಾದ 263 ಪ್ರಜೆಗಳಿಗೆ ವೀಸಾ ಕೊಡಿಸಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ತಿ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಹಣ ಅಕ್ರಮ ಹಣ ವರ್ಗಾವಣೆ (ಪಿಎಂಎಲ್‌ಎ) ಪ್ರಕರಣ ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT