ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ತಿಗೆ ಬಂಧನದಿಂದ ಮಧ್ಯಂತರ ರಕ್ಷಣೆ

Last Updated 26 ಮೇ 2022, 10:53 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):ಚೀನಾ ವೀಸಾಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಇದೇ 30ರವರೆಗೆ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ದೆಹಲಿ ನ್ಯಾಯಾಲಯ ಗುರುವಾರ ನೀಡಿದೆ.

ಕಾರ್ತಿ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್‌ ಅವರು ಮಧ್ಯಂತರ ರಕ್ಷಣೆಗೆ ಸೂಚಿಸಿದರು. ಅಲ್ಲದೆ ಜಾಮೀನು ಅರ್ಜಿಗೆ ಸಂಬಂಧಿಸಿದಂತೆಇ.ಡಿಗೆ ನೋಟಿಸ್ ಜಾರಿಗೊಳಿಸಿದರು.

ಕಾರ್ತಿ ಅವರು ತಮ್ಮ ತಂದೆ ಪಿ.ಚಿದಂಬರಂ ಗೃಹ ಸಚಿವರಾಗಿದ್ದ ಅವಧಿಯಲ್ಲಿ (2011) ಚೀನಾದ263 ಪ್ರಜೆಗಳಿಗೆ ವೀಸಾ ಕೊಡಿಸಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ತಿ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಹಣ ಅಕ್ರಮ ಹಣ ವರ್ಗಾವಣೆ (ಪಿಎಂಎಲ್‌ಎ) ಪ್ರಕರಣ ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT