ಶುಕ್ರವಾರ, ಮಾರ್ಚ್ 31, 2023
23 °C

ವಿಶಾಖಪಟ್ಟಣ ಆಂಧ್ರಪ್ರದೇಶದ ನೂತನ ರಾಜಧಾನಿ: ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಂದಿನ ದಿನಗಳಲ್ಲಿ ವಿಶಾಖಪಟ್ಟಣವು ಆಂಧ್ರ ಪ್ರದೇಶದ ರಾಜಧಾನಿಯಾಗಲಿದೆ ಎಂದು ರಾಜ್ಯದ ಮುಖ್ಯಮಂತ್ರಿ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ ಅವರು ಮಂಗಳವಾರ ಹೇಳಿದರು.

ವಿಶಾಖಪಟ್ಟಣದಲ್ಲಿ ಮಾರ್ಚ್‌ನಲ್ಲಿ ಆಯೋಜನೆ ಆಗಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳದ ಪೂರ್ವಭಾವಿಯಾಗಿ ನಡೆದ ಸಭೆಯಲ್ಲಿ ಹೂಡಿಕೆದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಮುಂದಿನ ದಿನಗಳಲ್ಲಿ ನಮ್ಮ ರಾಜಧಾನಿಯಾಗಲಿರುವ ವಿಶಾಖಪಟ್ಟಣಕ್ಕೆ ನಾನು ನಿಮ್ಮೆಲ್ಲರನ್ನು ಆಮಂತ್ರಿಸುತ್ತಿದ್ದೇನೆ. ಕೆಲ ತಿಂಗಳಲ್ಲಿ ನನ್ನ ಕಚೇರಿಯನ್ನೂ ವಿಶಾಖಪಟ್ಟಣಕ್ಕೆ ವರ್ಗಾಯಿಸುತ್ತಿದ್ದೇನೆ’ ಎಂದು ಹೇಳಿದರು. 

ರಾಜ್ಯದ ಮೂರು ಪ್ರಮುಖ ನಗರಗಳಾದ ವಿಶಾಖಪಟ್ಟಣ, ಅಮರಾವತಿ ಮತ್ತು ಕರ್ನೂಲನ್ನು ರಾಜಧಾನಿಯನ್ನಾಗಿ ರೂಪಿಸುವುದಾಗಿ ಜಗನ್ ಅವರು ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದ್ದರು. ಮೂರು ರಾಜಧಾನಿ ಪ್ರಸ್ತಾವನೆಯನ್ನು ತಳ್ಳಿಹಾಕಿದ್ದ ಆಂಧ್ರ ಪ್ರದೇಶ ಹೈಕೋರ್ಟ್‌, ಅಮರಾವತಿಯನ್ನು ಮಾತ್ರ ರಾಜ್ಯ ರಾಜಧಾನಿಯನ್ನಾಗಿ ರೂಪಿಸುವಂತೆ ನಿರ್ದೇಶನ ನೀಡಿತ್ತು. ಈ ನಿರ್ದೇಶನವನ್ನು ಆಂಧ್ರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು