ಸೋಮವಾರ, ಜೂನ್ 14, 2021
27 °C

ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ವಿಶ್ವಭಾರತಿ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

ಬೋಲಾಪುರ, ಪಶ್ಚಿಮ ಬಂಗಾಳ: ವಿಶ್ವವಿದ್ಯಾಲಯದ ಆವರಣದಲ್ಲಿ ಕೇಂದ್ರೀಯ ಭದ್ರತಾ ಪಡೆಗಳನ್ನು ನಿಯೋಜಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ವಿಶ್ವ ಭಾರತಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಮಂಗಳವಾರ ನಿರ್ಧರಿಸಿದೆ.

ರವೀಂದ್ರನಾಥ ಟ್ಯಾಗೋರ್‌‌ ಸ್ಥಾಪಿಸಿದ್ದ ವಿಶ್ವ ಭಾರತಿಯು ಕೇಂದ್ರೀಯ ವಿಶ್ವವಿದ್ಯಾಲಯವಾಗಿದೆ. ಪ್ರಧಾನಿ ಹುದ್ದೆಯಲ್ಲಿರುವವರು ಇದರ ಕುಲಪತಿಗಳಾಗಿರುತ್ತಾರೆ.

ವಿಶ್ವವಿದ್ಯಾಲಯದ ಮೈದಾನದಲ್ಲಿ  ಪ್ರತಿ ವರ್ಷವೂ ಚಳಿಗಾಲದ ಅವಧಿಯಲ್ಲಿ ಪೌಶ್‌ ಮೇಳ ಆಯೋಜಿಸಲಾಗುತ್ತದೆ. ಈ ಬಾರಿ ಮೇಳ ರದ್ದು ಮಾಡುವುದಾಗಿ ತಿಳಿಸಿದ್ದ ವಿಶ್ವವಿದ್ಯಾಲಯದ ಆಡಳಿತ ಮಂಡಳಿ, ಮೈದಾನದ ಸುತ್ತಲೂ ತಡೆಗೋಡೆ ನಿರ್ಮಿಸಲು ಮುಂದಾಗಿತ್ತು. ಇದರಿಂದ ಕೆರಳಿದ ಸುಮಾರು 4,000 ಮಂದಿಯನ್ನೊಳಗೊಂಡ ಸ್ಥಳೀಯರ ಗುಂಪು ಸೋಮವಾರ ವಿಶ್ವವಿದ್ಯಾಲಯದ ಆವರಣದೊಳಗೆ ನುಗ್ಗಿ ಗಲಭೆ ನಡೆಸಿತ್ತು. ‘ಪ್ರಧಾನಿ ಅವರು ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾಗಿದ್ದಾರೆ. ಹೀಗಾಗಿ ಅವರ ಮಧ್ಯ ಪ್ರವೇಶಕ್ಕೆ ಮನವಿ ಮಾಡಬೇಕೆಂದು ಕಾರ್ಯಕಾರಿ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ’ ಎಂದು ಸದಸ್ಯರೊಬ್ಬರು ಮಂಗಳವಾರ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಒಟ್ಟು ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಬಿರ್ಭುಮ್‌ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಶ್ಯಾಮ್‌ ಸಿಂಗ್‌ ತಿಳಿಸಿದ್ದಾರೆ.

‘ಪರಿಸ್ಥಿತಿ ಶಾಂತವಾಗುವವರೆಗೂ ವಿಶ್ವವಿದ್ಯಾಲಯದಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸದಿರಲು ತೀರ್ಮಾನಿಸಲಾಗಿದೆ. ಇದರಿಂದ ಪ್ರವೇಶ ಪ್ರಕ್ರಿಯೆ, ಪರೀಕ್ಷೆ ಹಾಗೂ ತುರ್ತು ಕಾರ್ಯಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ’ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು