ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ನೇಪಾಳ ಭೇಟಿ: ಮೋದಿ

Last Updated 15 ಮೇ 2022, 14:37 IST
ಅಕ್ಷರ ಗಾತ್ರ

ನವದೆಹಲಿ: ಭಾರತವು ನೇಪಾಳದೊಂದಿಗೆ ಹೊಂದಿರುವ ಸಂಬಂಧವು ಅಪೂರ್ವವಾದುದು ಎಂದುಪ್ರಧಾನಿ ನರೇಂದ್ರ ಮೋದಿ ಭಾನುವಾರ ತಿಳಿಸಿದರು.

ನೆರೆಯ ದೇಶ ನೇಪಾಳದ ಲುಂಬಿನಿಯಲ್ಲಿ ನಡೆಯುವ ಬುದ್ಧ ಪೂರ್ಣಿಮೆಯಲ್ಲಿ ಪಾಲ್ಗೊಳ್ಳುವ ಒಂದು ದಿನದ ಮೊದಲು ಪ್ರಧಾನಿ ಮೋದಿ, ‘ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಕಳೆದ ತಿಂಗಳು ಭಾರತಕ್ಕೆ ಭೇಟಿ ನೀಡಿದಾಗ ನಡೆದ ಫಲಪ್ರದ ಮಾತುಕತೆಗಳ ನಂತರ ಅವರನ್ನು ಮತ್ತೊಮ್ಮೆ ಭೇಟಿಯಾಗಲು ಎದುರು ನೋಡುತ್ತಿದ್ದೇನೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ನೇಪಾಳ ಭೇಟಿಯು ಸಮಯೋಚಿತ ಗೌರವದ ಸಂಬಂಧಗಳನ್ನು ಇನ್ನಷ್ಟು ಗಾಢಗೊಳಿಸುವ ಉದ್ದೇಶ ಹೊಂದಿದೆ. ಜಲವಿದ್ಯುತ್, ಅಭಿವೃದ್ಧಿ ಮತ್ತು ಸಂಪರ್ಕ ಸೇರಿ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ವೃದ್ಧಿಗೆ ಎರಡೂ ಕಡೆಯಿಂದಲೂ ಪ್ರಯತ್ನಗಳು ಮುಂದುವರಿಸಲಿವೆ’ ಎಂದು ಅವರು ಹೇಳಿದ್ದಾರೆ.

‘ನೇಪಾಳ ಪ್ರವಾಸದ ವೇಳೆ ಪವಿತ್ರ ಮಾಯಾದೇವಿ ದೇವಸ್ಥಾನಕ್ಕೆ ಭೇಟಿ ನೀಡುವ ಜತೆಗೆ, ಲುಂಬಿನಿ ಮೊನಾಸ್ಟಿಕ್ ವಲಯದಲ್ಲಿ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಭಾರತದ ಅಂತರರಾಷ್ಟ್ರೀಯ ಕೇಂದ್ರದ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುತ್ತೇನೆ’ ಎಂದು ಮೋದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT