ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಮೆರಿಕ: ಜೂನ್‌ 12ರಂದು ವಿವೇಕಾನಂದ ಯೋಗ ವಿ.ವಿ ಮೊದಲ ಘಟಿಕೋತ್ಸವ

23 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಣೆ
Published : 4 ಜೂನ್ 2022, 11:41 IST
ಫಾಲೋ ಮಾಡಿ
Comments

ವಾಷಿಂಗ್ಟನ್‌ (ಪಿಟಿಐ): ಲಾಸ್‌ ಏಂಜಲೀಸ್‌ನಲ್ಲಿರುವ ವಿವೇಕಾನಂದ ಯೋಗ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವವು ಜೂನ್‌ 12ರಂದು ನಡೆಯಲಿದೆ. 23 ವಿದ್ಯಾರ್ಥಿಗಳಿಗೆ ಈ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಲಾಗುತ್ತಿದೆ.

‘ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ನಡೆಯುತ್ತಿರುವುದು ಹೆಮ್ಮೆಯ ವಿಷಯ. ಅಮೆರಿಕದಲ್ಲಿ ಯೋಗ ವಿಶ್ವವಿದ್ಯಾಲಯ ಸ್ಥಾಪಿಸಿದ ಶ್ರೇಯಸ್ಸು ಡಾ.ಎಚ್‌.ಆರ್‌.ನಾಗೇಂದ್ರ ಅವರಿಗೆ ಸಲ್ಲಬೇಕು‘ ಎಂದು ವಿ.ವಿ.ಯ ಸಂಸ್ಥಾಪಕ ನಿರ್ದೇಶಕ ಪ್ರೇಮ್ ಭಂಡಾರಿ ತಿಳಿಸಿದ್ದಾರೆ.

ಭಾರತದ ಖ್ಯಾತ ಯೋಗ ಗುರು ಡಾ.ಎಚ್‌.ಆರ್‌.ನಾಗೇಂದ್ರ ಅವರು ವಿವೇಕಾನಂದ ಯೋಗ ವಿಶ್ವವಿದ್ಯಾಲಯದ ವಿಶ್ವಸ್ಥ ಮಂಡಳಿಯ ಚೇರಮನ್‌. ಅವರು ಬೆಂಗಳೂರಿನಲ್ಲಿರುವ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ (ಎಸ್‌–ವಿವೈಎಎಸ್‌ಎ) ವಿಶ್ವವಿದ್ಯಾಲಯದ ಕುಲಪತಿಯೂ ಆಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT