ಭಾನುವಾರ, ಮಾರ್ಚ್ 7, 2021
32 °C

13 ಸಾವಿರ ಜನರಿಗೆ ಕೋವ್ಯಾಕ್ಸಿನ್‌ ಎರಡನೇ ಡೋಸ್‌

ಪಿಟಿಐ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಮೂರನೇ ಹಂತದ ಕ್ಲಿನಿಕಲ್‌ ಪ್ರಯೋಗದಡಿ 13 ಸಾವಿರ ಸ್ವಯಂಸೇವಕರಿಗೆ ಕೋವಿಡ್‌–19 ಲಸಿಕೆಯಾದ ಕೋವ್ಯಾಕ್ಸಿನ್‌ನ ಎರಡನೇ ಡೋಸ್‌ ಅನ್ನು ಯಶಸ್ವಿಯಾಗಿ ನೀಡಲಾಗಿದೆ ಎಂದು ಭಾರತ್‌ ಬಯೋಟೆಕ್‌ ಕಂಪನಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸುಚಿತ್ರಾ ಎಲ್ಲ ಅವರು ಶುಕ್ರವಾರ ತಿಳಿಸಿದರು.

ಕೋವ್ಯಾಕ್ಸಿನ್‌ ಮೂರನೇ ಹಂತದ ಪ್ರಯೋಗಕ್ಕೆ 25,800 ಸ್ವಯಂ ಸೇವಕರು ನೋಂದಣಿಯಾಗಿದ್ದಾರೆ ಎಂದು ಭಾರತ್‌ ಬಯೋಟೆಕ್‌ ಈ ಹಿಂದೆ ತಿಳಿಸಿತ್ತು. ತುರ್ತು ಪರಿಸ್ಥಿತಿಯಲ್ಲಿ ಕೋವ್ಯಾಕ್ಸಿನ್‌ ಮಾರಾಟ ಮತ್ತು ವಿತರಣೆಗೆ ಅನುಮತಿ ನೀಡಲಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಹಾಗೂ ರಾಷ್ಟ್ರೀಯ ರೋಗಸೂಕ್ಷ್ಮಾಣು ಅಧ್ಯಯನ ಸಂಸ್ಥೆ(ಎನ್‌ಐವಿ) ಸಹಯೋಗದಲ್ಲಿ ಸ್ವದೇಶಿಯಾಗಿ ಕೋವ್ಯಾಕ್ಸಿನ್‌ ಅಭಿವೃದ್ಧಿಪಡಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು