ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಬುಧವಾರ ಬೆಳಿಗ್ಗೆ 7ರಿಂದ ಆರಂಭವಾಗಿದೆ. ರಾಜ್ಯದ ಒಟ್ಟು 71 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು,1,066 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕೋವಿಡ್–19 ಸಾಂಕ್ರಾಮಿಕ ಕಾಣಿಸಿಕೊಂಡ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಮತದಾನ ಆರಂಭಕ್ಕೂ ಮುನ್ನ ಮತಗಟ್ಟೆಗಳಲ್ಲಿ ಸೋಂಕು ನಿವಾರಕ ಸಿಂಪಡಿಸಲಾಗಿದೆ. ಚುನಾವಣಾ ಕಾರ್ಯಗಳಿಗೆ ನಿಯೋಜನೆಯಾಗಿರುವ ಅಧಿಕಾರಿಗಳು ಮಾಸ್ಕ್, ಗ್ಲೌಸ್‌ಗಳನ್ನು ಧರಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಮತದಾರರಿಗೆ ಸ್ಯಾನಿಟೈಜರ್ ಪೂರೈಸಲಾಗುತ್ತಿದೆ.

ಮೊದಲ ಹಂತದ 71 ಕ್ಷೇತ್ರಗಳ ಪೈಕಿ ಬಹುತೇಕ ನಕ್ಸಲ್ ಪೀಡಿತ ಮಗಧ, ಶಾಬಾದ್ ಮತ್ತು ಮುಂಗೇರ್ ಪ್ರದೇಶಕ್ಕೆ ಸೇರಿವೆ. ನಕ್ಸಲ್ ಬಾಧಿತ ಪ್ರದೇಶದಲ್ಲಿ ಮತದಾನಕ್ಕಾಗಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ಔರಂಗಬಾದ್‌ನ ಢಿಬ್ರಾ ಪ್ರದೇಶದಲ್ಲಿ ಎರಡು ಸುಧಾರಿತ ಸ್ಫೋಟಕಗಳನ್ನು ಪತ್ತೆ ಮಾಡಿರುವ ಸಿಆರ್‌ಪಿಎಫ್, ಅವುಗಳನ್ನು ನಿಷ್ಕ್ರಿಯಗೊಳಿಸಿದೆ.

ಸತತ ನಾಲ್ಕನೇ ಅವಧಿಗೂ ಮುಖ್ಯಮಂತ್ರಿ ಹುದ್ದೆ ಉಳಿಸಿಕೊಳ್ಳಲು ಬಯಸಿರುವ ನಿತೀಶ್ ಕುಮಾರ್ ಅವರಿಗೆ ಆರ್‌ಜೆಡಿಯ ತೇಜಸ್ವಿ ಯಾದವ್ ಭಾರಿ ಸ್ಪರ್ಧೆ ಒಡ್ಡಿದ್ದಾರೆ. 'ಚುನಾವಣೆಯು ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವಾಗಿದೆ. ಪ್ರತಿಯೊಬ್ಬರೂ ಮತದಾನದ ಹಕ್ಕು ಕೈಗೊಳ್ಳುವಂತೆ ಕೋರುತ್ತೇನೆ' ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಮತದಾನಕ್ಕೂ ಮುನ್ನ ಲಖಿಸರಾಯಿಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದರು.

ಇದನ್ನೂ ಓದಿ: ಕೋವಿಡ್ ಮಾರ್ಗಸೂಚಿ ಅನುಸರಿಸಿ, ಪ್ರಜಾಪ್ರಭುತ್ವದ ಪರ್ವದಲ್ಲಿ ಭಾಗಿಯಾಗಿ: ಮೋದಿ

ಎನ್‌ಡಿಎ ಮೈತ್ರಿಕೂಟದಲ್ಲಿ ಜೆಡಿಯು, ಬಿಜೆಪಿ, ಎಚ್‌ಎಎಂ ಮತ್ತು ಹೊಸ ಪಕ್ಷ ವಿಕಾಸಶೀಲ ಇನ್ಸಾನ್ ಪಾರ್ಟಿ (ವಿಐಪಿ) ಇವೆ. ಆರ್‌ಜೆಡಿ ನೇತೃತ್ವದ ಮಹಾಮೈತ್ರಿಕೂಟದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳಿವೆ. ಕೇಂದ್ರದಲ್ಲಿ ಎನ್‌ಡಿಎ ಭಾಗವಾಗಿರುವ ಎಲ್‌ಜೆಪಿ, ಬಿಹಾರದಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದೆ. ಈ ಪಕ್ಷದ 137 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇವರಲ್ಲಿ ಹೆಚ್ಚಿನವರು ಜೆಡಿಯು ವಿರುದ್ಧವೇ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಇರುವಲ್ಲಿ ಎಲ್‌ಜೆಪಿ ಅಭ್ಯರ್ಥಿಗಳನ್ನು ಹಾಕಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.