ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UP Assembly Elections: ಬಿರುಸುಗೊಂಡ ಮೂರನೇ ಹಂತದ ಮತದಾನ

Last Updated 20 ಫೆಬ್ರುವರಿ 2022, 6:22 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು (ಭಾನುವಾರ) ನಡೆಯುತ್ತಿದ್ದು, ಮತದಾನ ಬಿರುಸುಗೊಂಡಿದೆ.

59 ಕ್ಷೇತ್ರಗಳಲ್ಲಿ627 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ 7 ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಎರಡು ಹಂತದ (ಫೆಬ್ರುವರಿ 10 ಮತ್ತು 14ರಂದು) ಮತದಾನ ಈಗಾಗಲೇ ಮುಗಿದಿದೆ. ಫೆಬ್ರುವರಿ 23, 27, ಮಾರ್ಚ್‌ 3 ಮತ್ತು 7ರಂದು ಉಳಿದ ಹಂತಗಳ ಮತದಾನ ನಡೆಯಲಿದೆ. ಮಾರ್ಚ್‌ 10 ರಂದು ಫಲಿತಾಂಶ ಪ್ರಕಟವಾಗಲಿದೆ.

2017ರ ಚುನಾವಣೆಯಲ್ಲಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಎಸ್‌ಪಿ 47, ಬಿಎಸ್‌ಪಿ 19 ಕ್ಷೇತ್ರಗಳಲ್ಲಿ ಜಯ ಕಂಡರೆ, ಕಾಂಗ್ರೆಸ್ ಕೇವಲ 7 ಕಡೆ ಖಾತೆ ತೆರೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT