ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ಡಿಡಿಸಿ ನಾಲ್ಕನೇ ಹಂತದ ಮತದಾನ ಆರಂಭ

Last Updated 7 ಡಿಸೆಂಬರ್ 2020, 6:17 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿಗೆ (ಡಿಡಿಸಿ) ಚುನಾವಣೆ ನಡೆಯುತ್ತಿದ್ದು, ಸೋಮವಾರ ನಾಲ್ಕನೇ ಹಂತದ ಮತದಾನ ಆರಂಭವಾಗಿದೆ.

ಜಮ್ಮು ಮತ್ತು ಕಾಶ್ಮೀರದ ತಲಾ 17 ವಿಭಾಗಗಳಲ್ಲಿನ 34 ಸ್ಥಾನಗಳಿಗಾಗಿ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಆದರೆ ಚಳಿಯಿಂದಾಗಿ ಮತಗಟ್ಟೆಗಳಲ್ಲಿ ಮತದಾರರ ಸಂಖ್ಯೆ ವಿರಳವಾಗಿತ್ತು.

ಕಾಶ್ಮೀರದಲ್ಲಿ 48 ಮಹಿಳೆಯರು ಸೇರಿದಂತೆ ಒಟ್ಟು 138 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಜಮ್ಮುವಿನಲ್ಲಿ 34 ಮಹಿಳೆಯರು ಸೇರಿ ಒಟ್ಟು 111 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ನಾಲ್ಕನೇ ಹಂತದಲ್ಲಿ 123 ಸರಪಂಚ್‌ ಸ್ಥಾನಗಳಿಗಾಗಿ ಮತದಾನ ನಡೆಯುತ್ತಿದೆ. ಆದರೆ, ಈಗಾಗಲೇ ಈ ಸ್ಥಾನಗಳಿಗೆ 45 ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. 50 ಕ್ಷೇತ್ರಗಳಿಗಾಗಿ ನಡೆಯುತ್ತಿರುವ ಮತದಾನದಲ್ಲಿ 47 ಮಹಿಳೆಯರು ಸೇರಿದಂತೆ 137 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಲ್ಕನೇ ಹಂತದಲ್ಲಿ 1207 ಪಂಚ್‌ ಸ್ಥಾನಗಳಿಗಾಗಿ ಚುನಾವಣೆ ನಡೆಯುತ್ತಿದೆ. ಇದರಲ್ಲಿ 416 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿ ಒಟ್ಟು 216 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, 129 ಮಹಿಳೆಯರು ಸೇರಿ 478 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ನಾಲ್ಕನೇ ಹಂತದ ಮತದಾನಕ್ಕೆ ಒಟ್ಟು 1,910 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಜಮ್ಮುವಿನಲ್ಲಿ 781 ಮತ್ತು ಕಾಶ್ಮೀರದಲ್ಲಿ 1129 ಮತಗಟ್ಟೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT