ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಸಿ ಸಾಕ್ಷ್ಯಚಿತ್ರ, ಉದ್ಯಮಿ ಸೊರೊಸ್‌ ವಿರುದ್ಧ ಧನಕರ್‌ ಕಿಡಿ

Last Updated 28 ಫೆಬ್ರುವರಿ 2023, 16:06 IST
ಅಕ್ಷರ ಗಾತ್ರ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರ ಹಾಗೂ ಮೋದಿ ಅವರನ್ನು ಟೀಕಿಸಿದ್ದ ಅಮೆರಿಕದ ಶ್ರೀಮಂತ ಉದ್ಯಮಿ ಜಾರ್ಜ್‌ ಸೊರೊಸ್‌ ವಿರುದ್ಧ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಕಿಡಿಕಾರಿದ್ದಾರೆ.

ಐಐಟಿ ಮದ್ರಾಸ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನಾವೀನ್ಯತೆ ಕೇಂದ್ರ ಉದ್ಘಾಟಿಸಿ ಮಂಗಳವಾರ ಮಾತನಾಡಿದ ಅವರು ‘ರಾಜಕೀಯದಲ್ಲಿ ಇರುವವರು ಇನ್ನೊಂದು ಬಗೆಯ ರಾಜಕಾರಣದಲ್ಲಿ ತೊಡಗಿರುವವರ ವಿರುದ್ಧ ಹೋರಾಡಬೇಕು. ತರ್ಕಬದ್ಧ ಪ್ರಶ್ನೆಗಳನ್ನು ಎದುರಿಸಬೇಕು’ ಎಂದು ಹೇಳಿದ್ದಾರೆ.

‘2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಹಿಂಸಾಚಾರದ ಕುರಿತು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗಿತ್ತು. ಈ ದೇಶದ ಸರ್ವೋಚ್ಛ ನ್ಯಾಯಾಲಯವು ಎರಡು ದಶಕಗಳ ಬಳಿಕ ಈ ಕುರಿತ ತೀರ್ಪು ಪ‍್ರಕಟಿಸಿತ್ತು. ಹಿಂಸಾಚಾರದಲ್ಲಿ ಗುಜರಾತ್‌ನ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಪಾತ್ರದ ಕುರಿತು ಬಿಬಿಸಿಯು ತನ್ನ ಸಾಕ್ಷ್ಯಚಿತ್ರದಲ್ಲಿ ಉಲ್ಲೇಖಿಸಿದೆ. ಇದನ್ನು ಕೆಲವರು ಅಭಿವ್ಯಕ್ತಿ ಸ್ವಾತಂತ್ರ್ಯವೆಂದು ಕರೆದಿದ್ದಾರೆ. ಅಭಿವ್ಯಕ್ತಿಯ ಹೆಸರಿನಲ್ಲಿ ಸುಪ್ರೀಂ ಕೋರ್ಟ್‌ನ ವಿಶ್ವಾಸಾರ್ಹತೆ ಪ್ರಶ್ನಿಸಬಹುದೆ? ಎರಡು ದಶಕಗಳ ಕಾಲ ನಡೆದ ತನಿಖೆಯನ್ನು ಕಡೆಗಣಿಸಬಹುದೇ? ಇದು ಮತ್ತೊಂದು ಬಗೆಯ ರಾಜಕಾರಣ ಎಂಬುದು ಸ್ಪಷ್ಟ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT