ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಆಡಳಿತ ಸುಧಾರಣಾ ಆಯೋಗಕ್ಕೆ ಅಚ್ಯುತಾನಂದನ್ ರಾಜೀನಾಮೆ

Last Updated 30 ಜನವರಿ 2021, 13:02 IST
ಅಕ್ಷರ ಗಾತ್ರ

ತಿರುವನಂತಪುರ: ಅನಾರೋಗ್ಯದ ಕಾರಣ ನೀಡಿ, ಕೇರಳದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಸಿಪಿಎಂ ನಾಯಕ ವಿ.ಎಸ್. ಅಚ್ಯುತಾನಂದನ್ ರಾಜೀನಾಮೆ ನೀಡಿದ್ದಾರೆ.

ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿರುವ ಅಚ್ಯುತಾನಂದನ್ ತಮ್ಮ ರಾಜೀನಾಮೆ ಪತ್ರವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಸಲ್ಲಿಸಿದ್ದಾರೆ.

ಆಯೋಗದ ಅಧ್ಯಕ್ಷರಾಗಿ ನಾಲ್ಕೂವರೆ ವರ್ಷಗಳ ಕಾಲ ಕಾರ್ಯನಿರ್ವಹಿಸಿರುವ ಅಚ್ಯುತಾನಂದನ್ ಅವರು, ಇದುವರೆಗೆ 11 ಅಧ್ಯಯನ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ.

‘ಅಧ್ಯಯನದ ವರದಿಗಳನ್ನು ತಯಾರಿಸುವಾಗ ರಾಜ್ಯದ ಉದ್ದಗಲಕ್ಕೂ ತಿರುಗಾಡಿ ವಿವಿಧ ರೀತಿಯ ನೂರಾರು ಜನರೊಂದಿಗೆ ಚರ್ಚಿಸಿದ್ದೇನೆ. ಇನ್ನೂ ಎರಡು ವರದಿಗಳು ಅಂತಿಮ ಹಂತದಲ್ಲಿದ್ದು, ಅವುಗಳ ಕಾರ್ಯ ಪೂರ್ಣಗೊಂಡ ಬಳಿಕ ಸರ್ಕಾರಕ್ಕೆ ಸಲ್ಲಿಸುವೆ. ನನ್ನ ರಾಜೀನಾಮೆ ಜ. 31ರಿಂದಲೇ ಅನ್ವಯವಾಗಲಿದೆ’ ಎಂದೂ ಅಚ್ಯುತಾನಂದನ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT