ಸೋಮವಾರ, ಜನವರಿ 24, 2022
28 °C

ತಮಿಳುನಾಡು: ಮಾಸ್ಕ್‌ ಧರಿಸದೆ ಓಡಾಡುತ್ತಿದ್ದ ಜನ, ಎದುರು ಬಂದ ಸಿಎಂ ಸ್ಟಾಲಿನ್!

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಚೆನ್ನೈ: ಮಾಸ್ಕ್ ಧರಿಸದೆ ಓಡಾಡುತ್ತಿದ್ದ ಜನರಿಗೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು  ಖುದ್ದಾಗಿ ತಾವೇ ಮಾಸ್ಕ್‌ ವಿತರಿಸುವ ಮೂಲಕ ಗಮನ ಸೆಳೆದಿದ್ದಾರೆ. 

ಈ ಕುರಿತು ವಿಡಿಯೊವನ್ನು ಹಂಚಿಕೊಂಡಿರುವ ಸ್ಟಾಲಿನ್, ’ಕಚೇರಿಗೆ ತೆರಳುವ ರಸ್ತೆ ಮಾರ್ಗದಲ್ಲಿ ಹಲವು ಜನರು ಮಾಸ್ಕ್‌ ಧರಿಸಿರಲಿಲ್ಲ. ಅವರಿಗೆ ಮಾಸ್ಕ್‌ಗಳನ್ನು ವಿತರಿಸಿದ್ದೇನೆ‘ ಎಂದು ಬರೆದುಕೊಂಡಿದ್ದಾರೆ.

'ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಎಲ್ಲರೂ ದಯವಿಟ್ಟು ಮಾಸ್ಕ್ ಧರಿಸಿ‘ ಎಂದು ಸ್ಟಾಲಿನ್ ಮನವಿ ಮಾಡಿದ್ದಾರೆ. 

ದೇಶದಲ್ಲಿ ಕೋವಿಡ್‌ ಮತ್ತು ಓಮೈಕ್ರಾನ್ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಸದ್ಯ ತಮಿಳಿನಾಡಿನಲ್ಲಿ 10,364 ಸಕ್ರಿಯ ಕೋವಿಡ್‌ ಪ್ರಕರಣಗಳಿವೆ. ಜತೆಗೆ, ಓಮೈಕ್ರಾನ್ ಸೋಂಕಿತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು