ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ: ಹಳಿ ಮೇಲೆ ಬಿದ್ದ ಮಗು ರಕ್ಷಿಸಿದ ಸಿಬ್ಬಂದಿಗೆ ಸಚಿವ ಗೋಯಲ್ ಮೆಚ್ಚುಗೆ

Last Updated 19 ಏಪ್ರಿಲ್ 2021, 9:39 IST
ಅಕ್ಷರ ಗಾತ್ರ

ಮುಂಬೈ: ರೈಲ್ವೆ ಫ್ಲಾಟ್‌ಫಾರ್ಮ್‌ನಲ್ಲಿ ನಡೆದುಕೊಂಡು ಹೋಗುವಾಗ ಆಯತಪ್ಪಿ ಬಿದ್ದ ಮಗುವೊಂದನ್ನು ಇನ್ನೇನು ರೈಲು ಬಂದೇ ಬಿಟ್ಟಿತು ಎನ್ನುವಷ್ಟರಲ್ಲಿ ರೈಲ್ವೆ ಸಿಬ್ಬಂದಿ ಜೀವ ಉಳಿಸಿದ ಘಟನೆಯು ಮುಂಬೈ ವಿಭಾಗದ ರೈಲ್ವೆ ನಿಲ್ದಾಣವೊಂದರಲ್ಲಿ ನಡೆದಿದೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ರೈಲ್ವೆ, ವಂಗಾನಿ ರೈಲ್ವೆ ಸ್ಟೇಷನ್‌ನ ಫ್ಲಾಟ್‌ಫಾರ್ಮ್‌ ನಂಬರ್ 2ರಲ್ಲಿ ತನ್ನ ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಗುವೊಂದು ಸಮತೋಲನ ಕಳೆದುಕೊಂಡು ರೈಲ್ವೆ ಹಳಿ ಮೇಲೆ ಬಿದ್ದಿದೆ. ಆಗ ಮುಂಬೈ ವಿಭಾಗದ ಮಯೂರ್ ಶೆಲ್ಖೆ ಅವರು ಮಗುವನ್ನು ರಕ್ಷಿಸುವ ಮೂಲಕ ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದೆ. ಅಲ್ಲದೆ ಘಟನೆಯ ವಿಡಿಯೊವನ್ನು ಹಂಚಿಕೊಂಡಿದೆ.

ಇನ್ನೊಂದೆಡೆ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಟ್ವೀಟ್ ಮಾಡಿ, ಅಸಾಧಾರಣ ಧೈರ್ಯಶಾಲಿ ಕಾರ್ಯವನ್ನು ಮಾಡಿದ ಮುಂಬೈನ ವಂಗಾನಿ ರೈಲ್ವೆ ನಿಲ್ದಾಣದ ರೈಲ್ವೆಮ್ಯಾನ್ ಮಯೂರ್ ಶೆಲ್ಖೆ ಅವರ ಬಗ್ಗೆ ತುಂಬಾ ಹೆಮ್ಮೆಯಾಗುತ್ತಿದೆ. ಅವರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ ಮತ್ತು ಮಗುವಿನ ಜೀವವನ್ನು ಉಳಿಸಿದ್ದಾರೆ ಎಂದು ಗೋಯಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗೋಯಲ್ ಅವರು ಹಂಚಿಕೊಂಡಿರುವ ವಿಡಿಯೊದಲ್ಲಿ, ತನ್ನ ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಗು ನೋಡ ನೋಡುತ್ತಲೇ ಆಯತಪ್ಪಿ ರೈಲ್ವೆ ಹಳಿ ಮೇಲೆ ಬೀಳುತ್ತದೆ. ಅಷ್ಟೊತ್ತಿಗಾಗಲೇ ಅದೇ ಹಳಿಯಲ್ಲಿ ಎದುರಿನಿಂದ ವೇಗವಾಗಿ ರೈಲು ಬರುತ್ತಿರುತ್ತದೆ. ಆಗ ರೈಲಿನ ಎದುರಿನಲ್ಲಿ ಬಾವುಟ ತೋರಿಸಲು ಮುಂದಾಗಿದ್ದ ಸಿಬ್ಬಂದಿ ಹಳಿಗೆ ಧುಮುಕಿ ಓಡಿ ಮಗುವನ್ನು ಎತ್ತಿಕೊಂಡ ಕ್ಷಣದಲ್ಲೇ ತಾವು ಬಚಾವಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT