ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣದಲ್ಲಿ ರೈತರ ಪ್ರತಿಭಟನೆ: ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

Last Updated 1 ಅಕ್ಟೋಬರ್ 2021, 8:18 IST
ಅಕ್ಷರ ಗಾತ್ರ

ಜಜ್ಜರ್‌: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ರೈತರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ನಡೆದಿದೆ. ಪ್ರತಿಭಟನಾ ನಿರತರನ್ನು ಚದುರಿಸಲು ಪೊಲೀಸರು ಜಲಫಿರಂಗಿಯನ್ನು ಪ್ರಯೋಗ ಮಾಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಜಜ್ಜರ್‌ನಲ್ಲಿ ಹರಿಯಾಣ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಪ್ರತಿಭಟನಾಕಾರರು ಚೌಟಾಲಾ ಅವರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಘರ್ಷಣೆ ನಡೆದಿದೆ. ‌

ಹೆಚ್ಚು ಸಂಖ್ಯೆಯಲ್ಲಿ ನೆರೆದಿದ್ದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಬಿಗಿ ಪೊಲೀಸ್‌ ಭದ್ರತೆ ಮತ್ತು ಅರೆ ಸೇನಾ ಪಡೆಯನ್ನು ನಿಯೋಜಿಸಲಾಗಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಬರದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಜಲಫಿರಂಗಿ ಪ್ರಯೋಗಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಪೊಲೀಸ್ ಉಪ ಆಯುಕ್ತ ಶ್ಯಾಮ್ ಲಾಲ್ ಪೂನಿಯಾ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT