ಸೋಮವಾರ, ಜುಲೈ 4, 2022
24 °C

ಮೆಟ್ಟೂರು ಜಲಾಶಯದಿಂದ ನೀರು ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ಎಕರೆಯಲ್ಲಿ ಕುರುವೈ (ಅಲ್ಪಾವಧಿ ಬೆಳೆ) ಬೆಳೆ ಬೆಳೆಯಲು ಮೆಟ್ಟೂರಿನ ಸ್ಟ್ಯಾನ್ಲಿ ಜಲಾಶಯದಿಂದ ಮಂಗಳವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ನೀರು ಬಿಡುಗಡೆ ಮಾಡಿದರು.  

ಮೆಟ್ಟೂರು ಜಲಾಶಯದಲ್ಲಿ ಗುಂಡಿ ಒತ್ತುವ ಮೂಲಕ ಮುಖ್ಯಮಂತ್ರಿ ಸ್ಟಾಲಿನ್ ಅವರು ನೀರು ಬಿಡುಗಡೆಗೆ ಚಾಲನೆ ನೀಡಿದರು. ಬಳಿಕ ಜಲಾಶಯಕ್ಕೆ ಪುಷ್ಪವೃಷ್ಟಿ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ದೊರೈ ಮುರುಗನ್, ಕೆ.ಎನ್. ನೆಹರು ಮತ್ತು ಇತರ ಅಧಿಕಾರಿಗಳು ಹಾಜರಿದ್ದರು.

ಕರ್ನಾಟಕದ ಕಾವೇರಿ ನದಿಯ ಜಲಾನಯನ ಪ್ರದೇಶಗಳಲ್ಲಿ ಅಕಾಲಿಕ ಮಳೆಯಿಂದಾಗಿ ಜಲಾಶಯಕ್ಕೆ ನಿರಂತರವಾಗಿ ನೀರಿನ ಒಳಹರಿವು ಹೆಚ್ಚಾಗಿದ್ದು, ಜಲಾಶಯದ ಪೂರ್ಣ ಮಟ್ಟ 120 ಅಡಿ ತಲುಪುವ ಸಾಧ್ಯತೆ ಇದೆ. ಹಾಗಾಗಿ, ಈ ಹಿಂದೆ ನಿಗದಿಪಡಿಸಿದಂತೆ ಜೂನ್‌ 12ಕ್ಕೂ ಮುನ್ನವೇ ತಮಿಳುನಾಡು ಸರ್ಕಾರ ನೀರು ಬಿಡುಗಡೆ ಮಾಡಿದೆ.

ಬ್ರಿಟಿಷರು ನಿರ್ಮಿಸಿರುವ ಈ ಜಲಾಶಯದಿಂದ ಸ್ವಾತಂತ್ರ್ಯಾನಂತರ ನಿಗದಿತ ದಿನಾಂಕಕ್ಕೂ ಮುನ್ನವೇ ಮೇ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅಣೆಕಟ್ಟಿನಿಂದ ನೀರನ್ನು ಹರಿಸಲಾಗುತ್ತಿದೆ. ಮೆಟ್ಟೂರು ಅಣೆಕಟ್ಟಿನಿಂದ ಹರಿಸಲಾಗುವ ನೀರು ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ಪುದುಕೊಟ್ಟೈ, ತಿರುಚಿರಾಪಳ್ಳಿ ಮತ್ತು ಕಡಲೂರು ಭಾಗಗಳ ರೈತರ ಜೀವನಾಡಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು