ಕೋಲ್ಕತ್ತ: ‘ಪೆಗಾಸಸ್ ಕುತಂತ್ರಾಂಶವನ್ನು ಬಳಸಿ ಪತ್ರಕರ್ತರು, ರಾಜಕೀಯ ನಾಯಕರ ಮೇಲೆ ಗೂಢಚರ್ಯೆ ನಡೆಸಿದ ಆರೋಪದ ಬಗ್ಗೆ ತನಿಖೆ ನಡೆಸಲು ಇಬ್ಬರು ಸದಸ್ಯರನ್ನು ಒಳಗೊಂಡ ತನಿಖಾ ಆಯೋಗವನ್ನು ರಚಿಸಲಾಗಿದೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.

ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಸರ್ಕಾರವು ಈ ಸಂಬಂಧ ತನಿಖಾ ಆಯೋಗ ರಚಿಸಬಹುದು ಅಥವಾ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಬಹುದು ಎಂದು ಭಾವಿಸಿದ್ದೆವು. ಆದರೆ, ಕೇಂದ್ರವು ಸುಮ್ಮನೆ ಕುಳಿತಿದೆ. ಹಾಗಾಗಿ ಈ ಆರೋಪದ ಬಗ್ಗೆ ತನಿಖೆ ನಡೆಸಲು ಆಯೋಗ ರಚಿಸಲಾಗಿದೆ’ ಎಂದು ಅವರು ತಿಳಿಸಿದರು.

ಕಲ್ಕತ್ತ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಜ್ಯೋತಿರ್ಮೇ ಭಟ್ಟಾಚಾರ್ಯ ಮತ್ತು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮದನ್ ಭೀಮರಾವ್ ಲೊಕೂರ್ ಅವರನ್ನೊಳಗೊಂಡ ಆಯೋಗ ಈ ಕುರಿತು ತನಿಖೆ ನಡೆಸಲಿದೆ ಎಂದರು.

‘ಪಶ್ಚಿಮ ಬಂಗಾಳದ ಜನರ ಹೆಸರು ಕೂಡ ಪೆಗಾಸಸ್ ಪಟ್ಟಿಯಲ್ಲಿ ಇದೆ ಎಂಬುದು ತಿಳಿದುಬಂದಿದೆ. ಕೇಂದ್ರ ಸರ್ಕಾರವು ಎಲ್ಲರ ಮೇಲೆ ನಿಗಾಯಿಡಲು ಪ್ರಯತ್ನಿಸುತ್ತಿದೆ. ಈ ಬಗ್ಗೆ ಆಯೋಗವು ತನಿಖೆ ನಡೆಸಲಿದೆ’ ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.