ಶನಿವಾರ, ಮೇ 8, 2021
18 °C
ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಶ್ಲಾಘನೆ

ಕೋವಿಡ್ ಮಾರ್ಗಸೂಚಿ ಪಾಲನೆ: ಮಮತಾ ಕ್ರಮ ಶ್ಲಾಘನೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಕೋವಿಡ್–19 ಮಾರ್ಗಸೂಚಿಗಳನ್ನು ಪಾಲಿಸುವ ಕುರಿತಾಗಿ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರ ಕ್ರಮವನ್ನು ಶ್ಲಾಘಿಸಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರು ಭಾನುವಾರ ಟ್ವೀಟ್ ಮಾಡಿದ್ದಾರೆ.

‘ಪ್ರಜಾಪ್ರಭುತ್ವವು ಜನರನ್ನು ಗೌರವಿಸುವುದಾಗಿದೆ. ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ. ಕೋವಿಡ್ ಮಾರ್ಗಸೂಚಿ ಮತ್ತು ಶಾಂತಿ ಪರಿಪಾಲನೆ ಬಗ್ಗೆ ಮಮತಾ ಅವರ ನಿಲುವು ಶ್ಲಾಘನೀಯ’ ಎಂದು ಟ್ವೀಟ್ ಮಾಡಿರುವ ಧನಕರ್ ಅವರು, ಅದನ್ನು ಮಮತಾ ಅವರ ಟ್ವೀಟ್‌ಗೆ ಟ್ಯಾಗ್ ಮಾಡಿದ್ದಾರೆ.

‘ರಾಜ್ಯದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಿ’ ಎಂದು ರಾಜ್ಯದ ಗೃಹಸಚಿವರು, ಪೊಲೀಸರು ಮತ್ತು ಕೋಲ್ಕತ್ತದ ಪೊಲೀಸರಿಗೆ ಟ್ವೀಟ್ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು