ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ರಾಜ್ಯಪಾಲರ ಕಿಡಿ

ಬಿಜೆಪಿ ಮುಖಂಡ ಹತ್ಯೆ: ಪ್ರತಿಕ್ರಿಯೆ ನೀಡದ ಗೃಹ ಕಾರ್ಯದರ್ಶಿ
Last Updated 5 ಅಕ್ಟೋಬರ್ 2020, 10:50 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳ ಸರ್ಕಾರದ ಕಾರ್ಯವೈಖರಿಯ ಬಗ್ಗೆ ರಾಜ್ಯಪಾಲ ಜಗದೀಪ್‌ ಧನ್‌ಖರ್‌ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕ ಮನೀಶ್ ಶುಕ್ಲಾ ಹತ್ಯೆ ಪ್ರಕರಣದ ಬಗ್ಗೆ ವಿವರ ನೀಡುವಂತೆ ಗೃಹ ಕಾರ್ಯದರ್ಶಿ ಮತ್ತು ಡಿಜಿಪಿಗೆ ರಾಜ್ಯಪಾಲರು ಸಮನ್ಸ್‌ ನೀಡಿದ್ದರು. ಆದರೆ, ಇಬ್ಬರು ರಾಜ್ಯಪಾಲರನ್ನು ಭೇಟಿಯಾಗಲಿಲ್ಲ.

ಮುಖ್ಯ ಕಾರ್ಯದರ್ಶಿ ಅಲಪನ್‌ ಬಂಡೋಪಾಧ್ಯಯ ಅವರು ಸೋಮವಾರ ಬೆಳಿಗ್ಗೆ ರಾಜ್ಯಪಾಲರನ್ನು ಭೇಟಿಯಾದರು.

ಈ ಸಂಬಂಧ ಟ್ವೀಟ್‌ ಮಾಡಿರುವ ರಾಜ್ಯಪಾಲರು,‘ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯಸ್ಥೆ ಹದಗೆಡುತ್ತಿದೆ. ರಾಜಕೀಯ ನಾಯಕರ ಹತ್ಯೆ ಮಾಡಲಾಗುತ್ತಿದೆ. ಆದರೂ ಗೃಹ ಕಾರ್ಯದರ್ಶಿ ಅಥವಾ ಡಿಜಿಪಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ’ ಎಂದಿದ್ದಾರೆ.

‘ಈ ಪ್ರಕರಣದ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜೊತೆ ತುರ್ತಾಗಿ ಮಾತುಕತೆ ನಡೆಸಲು ಸಂದೇಶ ಕಳುಹಿಸಿದ್ದೆ. ಆದರೆ, ಯಾವುದೇ ಪ್ರತಿಕ್ರಿಯೆಯನ್ನು ಮುಖ್ಯಮಂತ್ರಿ ನೀಡಿಲ್ಲ. ಮೌನವೇ ಬಹಳಷ್ಟು ವಿಷಯಗಳನ್ನು ಹೇಳುತ್ತಿದೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ತಿತಗರ್ ಸಮೀಪ ಭಾನುವಾರ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸ್ಥಳೀಯ ಬಿಜೆಪಿ ಮುಖಂಡ ಮನೀಶ್‌ ಶುಕ್ಲ ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT