ಮಂಗಳವಾರ, ಜೂನ್ 28, 2022
28 °C

ಪರಿಹಾರ ಸಾಮಾಗ್ರಿ ಕದ್ದ ಆರೋಪ: ಬಿಜೆಪಿಯ ಸುವೇಂದು ಅಧಿಕಾರಿ, ಸೋದರನ ಮೇಲೆ ಕೇಸ್‌

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಕಾಂತಿ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಗಮನಾರ್ಹ ಬೆಳವಣಿಗೆಯೊಂದರಲ್ಲಿ ಕಾಂತಿ ಪುರಸಭೆ ಕಚೇರಿಯಿಂದ ಲಕ್ಷಾಂತರ ಮೌಲ್ಯದ ಪರಿಹಾರ ಸಾಮಾಗ್ರಿಗಗಳನ್ನು ಕದ್ದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಸುವೇಂದು ಅಧಿಕಾರಿ ಮತ್ತು ಅವರ ಸಹೋದರ ಸೌಮೇಂದು ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಕಾಂತಿ ಪುರಸಭೆ ಆಡಳಿತ ಮಂಡಳಿಯ ಸದಸ್ಯ ರತ್ನಾದೀಪ್ ಮನ್ನಾ ಅವರ ದೂರಿನ ಮೇರೆಗೆ ಸುವೇಂದು ಅಧಿಕಾರಿ ಮತ್ತವರ ಸೋದರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: 

2021 ಮೇ 29 ಮಧ್ಯಾಹ್ನ 12.30ಕ್ಕೆ ಸುವೇಂದು ಅಧಿಕಾರಿ ಹಾಗೂ ಸೌಮೇಂದು ಅಧಿಕಾರಿ ನಿರ್ದೇಶನದಂತೆ ಪುರಸಭೆ ಕಚೇರಿ ಗೋಡೌನ್ ಅನ್ನು ಬಲವಂತವಾಗಿ ತೆರೆದು ಲಕ್ಷಾಂತರ ರೂಪಾಯಿ ಮೌಲ್ಯದ ಪರಿಹಾರ ಸಾಮಾಗ್ರಿಗಳನ್ನು ಒಯ್ಯಲಾಗಿದೆ ಎಂದು ದೂರಲಾಗಿದೆ.

ಈ ಕಳ್ಳತನಕ್ಕೆ ಬಿಜೆಪಿ ನಾಯಕರು ಕೇಂದ್ರದ ಸಶಸ್ತ್ರ ಪಡೆಯ ನೆರವನ್ನು ಬಳಕೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು