ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಟರ್ಜಿ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಭುವನೇಶ್ವರಕ್ಕೆ ಕರೆದೊಯ್ದ ಇ.ಡಿ

ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ರಾಜ್ಯ ಕೈಗಾರಿಕೆ ಹಾಗೂ ವಾಣಿಜ್ಯ ಸಚಿವ ಪಾರ್ಥ ಚಟರ್ಜಿ ಅವರನ್ನು ಸೋಮವಾರ ಬೆಳಿಗ್ಗೆ ವೈದ್ಯಕೀಯ ಪರೀಕ್ಷೆಗಾಗಿ ಭುವನೇಶ್ವರದ ಏಮ್ಸ್‌ಗೆ ಕರೆದೊಯ್ಯಲಾಗಿದೆ.

ಬೆಳಿಗ್ಗೆ 9ರ ಸುಮಾರಿಗೆ ಕೋಲ್ಕತ ವಿಮಾನ ನಿಲ್ದಾಣದಿಂದ ಭುವನೇಶ್ವರಕ್ಕೆ ಏರ್ ಆಂಬುಲೆನ್ಸ್ ಮೂಲಕ ಇ.ಡಿ ಅಧಿಕಾರಿಗಳು ಚಟರ್ಜಿ ಅವರನ್ನು ಕರೆದೊಯ್ದಿದ್ದಾರೆ.

ಕಲ್ಕತ್ತ ಹೈಕೋರ್ಟ್‌ನ ನ್ಯಾಯಮೂರ್ತಿ ಬಿಬೇಕ್ ಚೌಧುರಿ ಅವರ ಏಕಸದಸ್ಯ ಪೀಠದ ಆದೇಶದ ಅನ್ವಯ ಚಟರ್ಜಿ ಅವರನ್ನು ಭುವನೇಶ್ವರ ಏಮ್ಸ್‌ಗೆ ಕರೆದೊಯ್ಯಲಾಗಿದೆ.

ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆಯ ಬಳಿಕ ಮಧ್ಯಾಹ್ನ 3ರ ವೇಳೆಗೆ ವರದಿಯನ್ನು ಸಲ್ಲಿಸುವಂತೆ ಕೋರ್ಟ್ ಸೂಚಿಸಿದೆ.

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಡಬ್ಲ್ಯುಬಿಎಸ್‌ಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಚಟರ್ಜಿ ಅವರನ್ನು ಶನಿವಾರ ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT