ನಾವೂ ಆಕ್ರಮಣಕಾರಿಯಾಗಿ ವರ್ತಿಸಬಲ್ಲೆವು: ಚೀನಾಗೆ ವಾಯಪಡೆ ಮುಖ್ಯಸ್ಥ ಎಚ್ಚರಿಕೆ

ನವದೆಹಲಿ: ಭಾರತದ ವಿರುದ್ಧ ಚೀನಾ ಆಕ್ರಮಣಕಾರಿ ನಿಲುವು ಪ್ರದರ್ಶಿಸಿದಲ್ಲಿ ಭಾರತೀಯ ವಾಯುಪಡೆಯೂ ಅದೇ ರೀತಿ ವರ್ತಿಸಲಿದೆ ಎಂದು ವಾಯುಪಡೆ ಮುಖ್ಯಸ್ಥ ಆರ್.ಕೆ.ಎಸ್.ಬಧೌರಿಯಾ ಎಚ್ಚರಿಕೆ ನೀಡಿದ್ದಾರೆ.
ನೈಜ ನಿಯಂತ್ರಣ ರೇಖೆಯಲ್ಲಿ ಚೀನಾವು ಆಕ್ರಮಣಕಾರಿಯಾಗಿ ವರ್ತಿಸುವ ಸಾಧ್ಯತೆ ಇದೆ ಎಂಬ ವರದಿಗಳ ಬಗ್ಗೆ ಅವರು ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಭಾರತದ ತಾಳ್ಮೆ ಪರೀಕ್ಷಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಈ ಹಿಂದೆ, ಲಡಾಖ್ ಮುಖಾಮುಖಿ ವೇಳೆ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಸಹ ಚೀನಾಗೆ ಎಚ್ಚರಿಕೆ ನೀಡಿದ್ದರು. ಮಾತುಕತೆ ಮೂಲಕ ಸೇನಾ ಮುಖಾಮುಖಿ ಸಮಸ್ಯೆ ಬಗೆಹರಿಸಲು ಭಾರತ ಸಿದ್ಧವಿದೆ ಎಂದೂ ಅವರು ಹೇಳಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.