ಭಾನುವಾರ, ಮೇ 29, 2022
29 °C

ಟಿಪ್ಪು ಸುಲ್ತಾನ್ ಬಗ್ಗೆ ಬಿಜೆಪಿಯಿಂದ ಕಲಿಯಬೇಕಾಗಿಲ್ಲ: ಸಂಜಯ್ ರಾವುತ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಮುಂಬೈನಲ್ಲಿ ನವೀಕರಿಸಿದ ಕ್ರೀಡಾ ಸಂಕೀರ್ಣಕ್ಕೆ 19ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರ ಹೆಸರನ್ನು ಮರುನಾಮಕರಣ ಮಾಡುವ ಮಹಾರಾಷ್ಟ್ರ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಶಿವಸೇನಾ ಮುಖಂಡ ಸಂಜಯ್ ರಾವುತ್, 'ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕರ್ನಾಟಕಕ್ಕೆ ತೆರಳಿ ಟಿಪ್ಪು ಸುಲ್ತಾನ್ ಒಬ್ಬ ಐತಿಹಾಸಿಕ ಯೋಧ, ಸ್ವಾತಂತ್ರ್ಯ ಹೋರಾಟಗಾರ ಎಂದು ಹೊಗಳಿದ್ದರು. ಹಾಗಾದರೆ ರಾಷ್ಟ್ರಪತಿ ಅವರ ರಾಜೀನಾಮೆಯನ್ನು ಕೇಳುತ್ತೀರಾ? ಈ ಕುರಿತು ಬಿಜೆಪಿ ಸ್ಪಷ್ಟನೆ ನೀಡಬೇಕು. ಇದು ಕೇವಲ ನಾಟಕವಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: 

 

 

 

'ತಮಗೆ ಮಾತ್ರ ಇತಿಹಾಸದ ಅರಿವಿದೆ ಎಂದು ಬಿಜೆಪಿ ಭಾವಿಸುತ್ತದೆ. ಪ್ರತಿಯೊಬ್ಬರೂ ಹೊಸ ಇತಿಹಾಸವನ್ನು ಬರೆಯಲು ಕುಳಿತಿದ್ದಾರೆ. ಈ ಇತಿಹಾಸಕಾರರು ಇತಿಹಾಸವನ್ನು ಬದಲಿಸಲು ಇಲ್ಲಿದ್ದಾರೆ. ಟಿಪ್ಪು ಸುಲ್ತಾನ್ ಬಗ್ಗೆ ನಮಗೆ ಚೆನ್ನಾಗಿ ಗೊತ್ತಿದೆ. ಬಿಜೆಪಿಯಿಂದ ಕಲಿಯಬೇಕಾಗಿಲ್ಲ' ಎಂದು ತಿರುಗೇಟು ನೀಡಿದರು.

 

'ರಾಜ್ಯ ಸರ್ಕಾರವು ನಿರ್ಧಾರವನ್ನು ತೆಗೆದುಕೊಳ್ಳಲು ಸಮರ್ಥವಾಗಿದೆ. ಹೊಸ ಇತಿಹಾಸವನ್ನು ಬರೆಯಲು ಪ್ರಯತ್ನಿಸಬೇಡಿ. ನೀವು ದೆಹಲಿಯಲ್ಲಿ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುವುದನ್ನು ಮುಂದುವರಿಸಬಹುದು. ಆದರೆ ನೀವು ಯಶಸ್ವಿಯಾಗುವುದಿಲ್ಲ' ಎಂದು ಹೇಳಿದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು