ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಶುರಾಮ ಕುಂಡ್‌ಗೆ ರೈಲ್ವೆ ಸಂಪರ್ಕ: ಅಮಿತ್ ಶಾ

ಅಕ್ಷರ ಗಾತ್ರ

ನಾಮ್‌ಸಾಯಿ (ಅರುಣಾಚಲ ಪ್ರದೇಶ): ಹಿಂದು ಯಾತ್ರಾಸ್ಥಳ ಪರಶುರಾಮ ಕುಂಡ್‌ಗೆ ರೈಲ್ವೆ ಸಂಪರ್ಕ ಕಲ್ಪಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ಅರುಣಾಚಲ ಪ್ರದೇಶದ ನಾಮ್‌ಸಾಯಿಯಲ್ಲಿ ಮಾತನಾಡಿದ ಅವರು, ‘ಪರಶುರಾಮ ಕುಂಡ್‌ಗೆ ರೈಲ್ವೆ ಸಂಪರ್ಕ ಕಲ್ಪಿಸಲಿದ್ದೇವೆ. ರಾಜ್ಯದಾದ್ಯಂತ ಉತ್ತಮ ರಸ್ತೆ ಸಂಪರ್ಕ ಕಲ್ಪಿಸಲಿದ್ದೇವೆ. ರಾಜ್ಯದ ದೂರದ ಸ್ಥಳಗಳನ್ನು ಸಂಪರ್ಕಿಸಲು ಅನುವು ಮಾಡಿಕೊಡಲಿದ್ದೇವೆ’ ಎಂದು ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ 9,600 ತೀವ್ರವಾದಿಗಳು ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಮರಳಿದ್ದಾರೆ. ನಮ್ಮ ಸರ್ಕಾರವು ಈಶಾನ್ಯದಲ್ಲಿ ವಿವಾದಗಳನ್ನು ಕೊನೆಗಾಣಿಸಿ ಶಾಂತಿ ನೆಲೆಸುವಂತೆ ಮಾಡುವ ಉದ್ದೇಶ ಹೊಂದಿದೆ. ಬಿಜೆಪಿ ಸರ್ಕಾರವು ಈಶಾನ್ಯ ರಾಜ್ಯಗಳಲ್ಲಿ ಭಯೋತ್ಪಾದನೆ ಪ್ರಮಾಣವನ್ನು ಶೇ 89ರಷ್ಟು ಕಡಿಮೆ ಮಾಡಿದೆ ಎಂದು ಅಮಿತ್ ಶಾ ಹೇಳಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ನಡುವಿನ ಅಂತರರಾಜ್ಯ ಗಡಿ ವಿವಾದವು 2023 ರ ಮೊದಲೇ ಬಗೆಹರಿಯುವ ನಿರೀಕ್ಷೆ ಇದೆ ಎಂದು ಗೃಹ ಸಚಿವರು ಶನಿವಾರ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT