ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಮತಾ ಬ್ಯಾನರ್ಜಿ ಕರೆದಿರುವ ಸಭೆಗೆ ಹೋಗುತ್ತೇವೆ. ನಮಗೆ ಒಗ್ಗಟ್ಟು ಮುಖ್ಯ: ಖರ್ಗೆ

ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಹೊರತುಪಡಿಸಿ ಸಾಧ್ಯವಿಲ್ಲ. ಏಕೆಂದರೆ, ನಮ್ಮ ಬಳಿ ಸರಿ ಸುಮಾರು ಶೇಕಡ 50ರಷ್ಟು ಮತಗಳಿವೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿರುವುದಾಗಿ ಎಎನ್‌ಐ ಟ್ವೀಟ್ ಮಾಡಿದೆ.

ಆದರೂ, ಟಿಎಂಸಿ ನಾಯಕಿಮಮತಾ ಬ್ಯಾನರ್ಜಿ ಕರೆದಿರುವ ಸಭೆಗೆ ಹೋಗುತ್ತೇವೆ. ವಿರೋಧ ಪಕ್ಷಗಳ ಒಗ್ಗಟ್ಟು ಮುರಿದುಕೊಳ್ಳಲು ನಮಗೆ ಇಷ್ಟವಿಲ್ಲ. ಏಕೆಂದರೆ, ಮಗೆ ಒಗ್ಗಟ್ಟು ಮುಖ್ಯ, ನಾವೆಲ್ಲರೂ ಒಟ್ಟಾಗಿ ಬಿಜೆಪಿ ವಿರುದ್ಧ ಹೋರಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಪ್ರತಿಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ.

ಸಭೆ ಕುರಿತಂತೆ ಮಾತನಾಡಿರುವ ಖರ್ಗೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ತೆಲಂಗಾಣ ಮುಖ್ಯಮಂತ್ರಿ, ಕೆ. ಚಂದ್ರಶೇಖರ್ ರಾವ್, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಸೇರಿ ಹಲವು ನಾಯಕರು ಸಭೆಯಲ್ಲಿ ಭಾಗವಹಿಸುತ್ತಿಲ್ಲ. ನಮ್ಮಲ್ಲಿ ಒಗ್ಗಟ್ಟಿನ ಅಗತ್ಯವಿದೆ. ರಾಷ್ಟ್ರಪತಿ ಚುನಾವಣೆಗೆ ಅವಿರೋಧ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT