ಗುರುವಾರ , ಜನವರಿ 28, 2021
27 °C

ಬಿಜೆಪಿ ಮೋಸ ಮಾಡಿದೆ, ಮಮತಾರನ್ನು ಬೆಂಬಲಿಸುತ್ತೇವೆ: ಗೋರ್ಖಾ ಜನಮುಕ್ತಿ ಮೋರ್ಚಾ

ಎಎನ್‌ಐ‌ Updated:

ಅಕ್ಷರ ಗಾತ್ರ : | |

ಸಿಲಿಗುರಿ( ಪಶ್ಚಿಮ ಬಂಗಾಳ): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಬೆಂಬಲಿಸುವುದಾಗಿ ಗೋರ್ಖಾ ಜನಮುಕ್ತಿ ಮೋರ್ಚಾದ (ಬಿಮಲ್ ಗುರುಂಗ್ ಬಣ) ರೋಶನ್ ಗಿರಿ ಘೋಷಿಸಿದ್ದಾರೆ.

ಸಾರ್ವಜನಿಕ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಿರಿ, 'ನಮಗೆ ಮೋಸ ಮಾಡಿದ ಬಿಜೆಪಿಯನ್ನು ಸೋಲಿಸಲು ನಾವು ನಿರ್ಧರಿಸಿದ್ದೇವೆ. ಅವರು 2009 ರಿಂದ 2020 ರವರೆಗೆ ನಮ್ಮ ಯಾವುದೇ ಬೇಡಿಕೆಗಳನ್ನು ಈಡೇರಿಸಲಿಲ್ಲ. ಅವರು ಭರವಸೆಗಳನ್ನು ಮಾತ್ರ ನೀಡುತ್ತಾರೆ. ನಾವು ಉತ್ತರ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯನ್ನು ಬೆಂಬಲಿಸುತ್ತೇವೆ. ತನ್ನ ಭರವಸೆಗಳನ್ನು ಉಳಿಸಿಕೊಂಡಿದ್ದರಿಂದ ಅವರನ್ನು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತೇವೆ,' ಎಂದು ಹೇಳಿದರು.

ಆದರೆ, 2024 ರ ಲೋಕಸಭಾ ಚುನಾವಣೆಯಲ್ಲಿ, ಗೋರ್ಖಾಲ್ಯಾಂಡ್ ಸಮಸ್ಯೆಗೆ ಸ್ಪಂದಿಸುವವರಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಗಿರಿ ಇದೇ ವೇಳೆ ಸ್ಪಷ್ಟಪಡಿಸಿದರು.

294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಗೆ ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು