ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ: ವಾರಾಂತ್ಯ ನಿರ್ಬಂಧ ಇಂದಿನಿಂದ

Last Updated 15 ಜನವರಿ 2022, 13:29 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕೋವಿಡ್‌ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಆಡಳಿತವು ಶನಿವಾರ (ಜ.15) ಮುಂಜಾನೆಯಿಂದಲೇ ಅಗತ್ಯ ವಸ್ತುಗಳ ಮಾರಾಟ ಹಾಗೂ ಸೇವೆ ಹೊರತುಪಡಿಸಿ ಬೇರೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.

ಮುಖ್ಯ ಕಾರ್ಯದರ್ಶಿ ಎ.ಕೆ.ಮೆಹ್ತಾ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಆದೇಶದ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆಯಿಂದಲೇ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಕೆಲ ಪ್ರದೇಶಗಳಲ್ಲಿ ವಾರಾಂತ್ಯ ನಿರ್ಬಂಧದ ಅರಿವಿಲ್ಲದೇ ಕೆಲಸ ಕಾರ್ಯಗಳಲ್ಲಿ ತೊಡಗಿದ್ದ ಜನರನ್ನು ಅಧಿಕಾರಿಗಳು ಮನವೊಲಿಸಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದರು.

ವಾರಾಂತ್ಯ ಕರ್ಫ್ಯೂ ಆದೇಶವು ಪ್ರತಿ ಶುಕ್ರವಾರ ರಾತ್ರಿ 9ಗಂಟೆಯಿಂದ ಸೋಮವಾರ ಮುಂಜಾನೆ 6 ಗಂಟೆವರೆಗೆ ಜಾರಿ ಇರಲಿದ್ದು, ಶಾಲಾ–ಕಾಲೇಜುಗಳಲ್ಲಿ ಆನ್‌ಲೈನ್‌ ತರಗತಿಗಳು ಮುಂದುವರೆಯಲಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

‘ರಸ್ತೆ, ವಾಯು ಹಾಗೂ ರೈಲು ಮಾರ್ಗಗಳ ಮೂಲಕ ರಾಜ್ಯಕ್ಕೆ ಬರುವ ಕೋವಿಡ್‌ ಲಕ್ಷಣಗಳು ಇಲ್ಲದ ಪ್ರಯಾಣಿಕರು ಆರ್‌ಟಿಪಿಸಿಆರ್‌ ಹಾಗೂ ರ‍್ಯಾಪಿಡ್‌ ಆಂಟಿಜೆನ್‌ ಪರೀಕ್ಷೆಗೆ ಒಳಗಾಗುವ ಅಗತ್ಯವಿಲ್ಲ.ರೋಗಲಕ್ಷಣ ಇರುವವರು ಆರ್‌ಟಿಪಿಸಿಆರ್‌ ಅಥವಾ ಆರ್‌ಎಟಿ ಪರೀಕ್ಷೆ ಒಳಗಾಗುವುದು ಕಡ್ಡಾಯ. ರಾಜ್ಯ ಸಾರಿಗೆ ಹಾಗೂ ಖಾಸಗಿ ಬಸ್‌ಗಳ ಮೂಲಕ ಕೇಂದ್ರಾಡಳಿತ ಪ್ರದೇಶ ಪ್ರವೇಶಿಸುವ ಅಂತರರಾಜ್ಯ ಪ್ರಯಾಣಿಕರು 72 ಗಂಟೆ ಒಳಗಿನ ನೆಗೆಟಿವ್‌ ವರದಿ ಕಡ್ಡಾಯ. ಕೋವಿಡ್‌ನ ಎರಡೂ ಲಸಿಕೆ ಪಡೆದ ಜನರಿಗೆ ಯಾವುದೇ ನಿರ್ಬಂಧ ಇಲ್ಲ’ ಎಂದು ಆದೇಶದಲ್ಲಿ ಹೇಳಲಾಗಿದೆ.

‘ಜಮ್ಮು ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಅವಧಿಯಲ್ಲಿ ಸಾರಿಗೆ, ಅಗತ್ಯ ಸೇವೆಗಳು, ಚಟುವಟಿಕೆಗಳು ಮತ್ತು ಹೋಮ್ ಡೆಲಿವರಿಗಳ ಮೇಲೆ ಯಾವುದೇ ನಿರ್ಬಂಧಗಳಿಲ್ಲ. ಆದರೂ ಸಾರ್ವಜನಿಕರು ಮನೆಯಿಂದ ಹೊರಬರಬಾರದು’ ಎಂದು ಜಮ್ಮು ಜಿಲ್ಲಾಧಿಕಾರಿ ಅನ್ಶುಲ್‌ ಗಾರ್ಗ್‌ ಟ್ವೀಟ್‌ ಮೂಲಕ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT