ಸೋಮವಾರ, ಅಕ್ಟೋಬರ್ 25, 2021
25 °C

ಪಂಜಾಬ್‌ ರೈತರಿಗೆ ನೂತನ ಸಿಎಂ ಚನ್ನಿ ಕೊಡುಗೆ: ನೀರು, ವಿದ್ಯುತ್‌ ಬಿಲ್‌ ಮನ್ನಾ 

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಚಂಡೀಗಢ: ಹೊಸದಾಗಿ ಅಧಿಕಾರ ಸ್ವೀಕರಿಸಿದ ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ ಸೋಮವಾರ ರೈತರ ನೀರು, ವಿದ್ಯುತ್‌ ಶುಲ್ಕ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ. 

ಮುಖ್ಯಮಂತ್ರಿಯಾದ ಬಳಿಕ ತಮ್ಮ ಮೊದಲ ಪತ್ರಿಕಾಗೋಷ್ಠಿಯಲ್ಲಿ ಚನ್ನಿ ಸೋಮವಾರ ನಡೆಸಿದರು. ಈ ವೇಳೆ ಅವರು ತಮ್ಮನ್ನು ‘ಆಮ್ ಆದ್ಮಿ’ ಎಂದು ಹೇಳಿಕೊಂಡರು.

ಪಾರದರ್ಶಕ ಸರ್ಕಾರವನ್ನು ಖಾತ್ರಿಪಡಿಸುವುದಾಗಿ ತಿಳಿಸಿದ ಅವರು, ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು