ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆ ವಿರೋಧಿಸಿದ ಪಶ್ಚಿಮ ಬಂಗಾಳ ಸರ್ಕಾರ

Last Updated 1 ಸೆಪ್ಟೆಂಬರ್ 2021, 15:23 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಇದನ್ನು ಪ್ರಶ್ನಿಸಿರುವ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಂತರ ನಡೆದ ಕೊಲೆಗಳು ಮತ್ತು ಅತ್ಯಾಚಾರ ಪ್ರಕರಣಗಳ ಕುರಿತು ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಆದೇಶಿಸಿತ್ತು.

'ಕೇಂದ್ರದ ಆಜ್ಞೆಯಂತೆ ಸಿಬಿಐ ಕೆಲಸ ಮಾಡುತ್ತಿದೆ. ಟಿಎಂಸಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಎಫ್‌ಐಆರ್‌ ದಾಖಲಾಗುತ್ತಿವೆ. ಸಿಬಿಐನಿಂದ ನ್ಯಾಯಯುತ ತನಿಖೆಯನ್ನು ನಿರೀಕ್ಷಿಸಬೇಡಿ' ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದೆ.

ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರಚಿಸಿದ್ದ ಸಮಿತಿ ಈ ಹಿಂದೆ ಶಿಫಾರಸು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT