ಸೋಮವಾರ, ಮಾರ್ಚ್ 1, 2021
17 °C

ಪಶ್ಚಿಮ ಬಂಗಾಳ: ಟಿಎಂಸಿ ಶಾಸಕ ಅರಿಂದಂ ಭಟ್ಟಾಚಾರ್ಯ ಬಿಜೆಪಿಗೆ ಸೇರ್ಪಡೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

DH File

ಕೋಲ್ಕತ್ತ: ಶಾಂತಿಪುರ ಕ್ಷೇತ್ರದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಶಾಸಕ ಅರಿಂದಂ ಭಟ್ಟಾಚಾರ್ಯ ಅವರು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬುಧವಾರ ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಪಶ್ಚಿಮ ಬಂಗಾಳದ ಉಸ್ತುವಾರಿ ಕೈಲಾಶ್‌ ವಿಜಯವರ್ಗಿಯ ಸಮ್ಮುಖದಲ್ಲಿ ಅರಿಂದಂ ಭಟ್ಟಾಚಾರ್ಯ ಅಧಿಕೃತವಾ‌ಗಿ ಬಿಜೆಪಿಗೆ ಸೇರಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಕಾಂಗ್ರೆಸ್‌ ಪಕ್ಷದಿಂದ (ಟಿಎಂಸಿ) ಆಯ್ಕೆಯಾಗಿದ್ದೇನೆ. ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲು ನಿರ್ಧರಿಸಿದ್ದೆ. ಆದರೆ, ಇದು ಸಾಧ್ಯವಾಗಲಿಲ್ಲ’ ಎಂದು ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಕೈಲಾಶ್‌ ವಿಜಯವರ್ಗಿಯ, ‘ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಮುಗಿಯುವವರೆಗೆ ಮುಖ್ಯಮಂತ್ರಿ ಯಾರು ಎಂಬುದನ್ನು ಘೋಷಣೆ ಮಾಡುವುದಿಲ್ಲ. ಬಹುಮತ ಬಂದ ಬಳಿಕ ಪಕ್ಷದ ಹೈಕಮಾಂಡ್‌ ನಿರ್ಧರಿಸುತ್ತಾರೆ’ ಎಂದು ತಿಳಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು