ಸೋಮವಾರ, ಜೂನ್ 21, 2021
29 °C

ಪಶ್ಚಿಮ ಬಂಗಾಳ ವಿಧಾನಸಭೆ: ಬಿಜೆಪಿಯ ಸುವೆಂದು ಅಧಿಕಾರಿ ವಿಪಕ್ಷ ನಾಯಕ

ಪ್ರಜಾವಾಣಿ Updated:

ಅಕ್ಷರ ಗಾತ್ರ : | |

DH File

ಕೋಲ್ಕತ್ತ: ಪಶ್ಚಿಮ ಬಂಗಾಳದ ಹೊಸ ವಿಧಾನಸಭೆಗೆ ಬಿಜೆಪಿಯು ವಿರೋಧ ಪಕ್ಷದ ನಾಯಕನಾಗಿ ಸುವೆಂದು ಅಧಿಕಾರಿ ಅವರನ್ನು ಆಯ್ಕೆ ಮಾಡಿದೆ.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಸುವೆಂದು ಅವರ ಹೆಸರನ್ನು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಪ್ರಕಟಿಸಿದರು.

ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಆಪ್ತ ವಲಯದಲ್ಲಿ ಸ್ಥಾನ ಪಡೆದಿದ್ದ  ಸುವೆಂದು, ನಂದಿಗ್ರಾಮ ಕ್ಷೇತ್ರದಿಂದ ಮಮತಾ ವಿರುದ್ಧ 1,900 ಮತಗಳ ಅಂತರದ ಗೆಲುವು ಸಾಧಿಸಿದರು.

ಸಂಪುಟ ದರ್ಜೆ ಸಚಿವರಾಗಿದ್ದ ಸುವೆಂದು ಅಧಿಕಾರಿ, ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಇದೀಗ ವಿಧಾನಸಭೆಯಲ್ಲಿ ಮಮತಾ ಮತ್ತು ಸುವೆಂದು ಮುಖಾಮುಖಿಯಾಗಲಿದ್ದಾರೆ.

294 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 213 ಸ್ಥಾನಗಳಲ್ಲಿ ಆಡಳಿತಾರೂಢ ಟಿಎಂಸಿ ಗೆಲುವು ಪಡೆದಿದೆ. ಬಿಜೆಪಿ 77 ಸ್ಥಾನಗಳನ್ನು ಪಡೆದು ವಿರೋಧ ಪಕ್ಷವಾಗಿ ರೂಪುಗೊಂಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು