ಸೋಮವಾರ, ಅಕ್ಟೋಬರ್ 25, 2021
25 °C

ಮಳೆ ಬಂದರೂ ಲೆಕ್ಕಿಸದೆ ಮನೆಯಿಂದ ಹೊರಬಂದು ನನಗೆ ಮತ ನೀಡಿ: ಮಮತಾ ಬ್ಯಾನರ್ಜಿ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ‘ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಲು ನೀವು (ಮತದಾರರು) ಚುನಾವಣೆಯ ದಿನ ಮಳೆ ಬಂದರೂ ಲೆಕ್ಕಿಸದೆ ಮನೆಯಿಂದ ಹೊರಬಂದು ನನಗೆ ಮತ ನೀಡಿ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಭವಾನಿಪುರ ಕ್ಷೇತ್ರದಲ್ಲಿ ಗುರುವಾರ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭವಾನಿಪುರ ‘ಮಿನಿ ಇಂಡಿಯಾ’ ಇದ್ದಂತೆ. ಇಲ್ಲಿ ಅನೇಕ ಸಮುದಾಯದವರು ವಾಸಿಸುತ್ತಿದ್ದಾರೆ. ನಾನು ಸಿ.ಎಂ ಆಗಿ ಮುಂದುವರಿಯಲು ನೀವು ಬಯಸಿದರೆ ದಯವಿಟ್ಟು ನನಗೆ ಮತ ನೀಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ.

‘ಸರ್ಕಾರ ಇಮಾಮ್‌ಗಳಿಗೆ ಏಕೆ ಗೌರವ ಧನ ನೀಡುತ್ತದೆ ಎಂದು ಜನರು ಹಲವು ಬಾರಿ ನನನ್ನು ಪ್ರಶ್ನಿಸಿದ್ದಾರೆ. ಆದರೆ, ನಾವು ಅರ್ಚಕರು ಸೇರಿದಂತೆ ಇತರೆ ಧಾರ್ಮಿಕ ಸ್ಥಳಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೂ ಗೌರವ ಧನವನ್ನು ನೀಡುತ್ತೇವೆ’ ಎಂದು ಮಮತಾ ಸ್ಪಷ್ಟಪಡಿಸಿದರು.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಅವರು ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.

2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು. ಸೆ.30ರಂದು ನಡೆಯುತ್ತಿರುವ ಉಪಚುನಾವಣೆಯಲ್ಲಿ ಮಮತಾ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್‌ ನಿರ್ಧರಿಸಿದೆ. ಅಕ್ಟೋಬರ್‌ 3ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ... ಬಿಜೆಪಿಯವರು ಟಿಎಂಸಿ ಕಚೇರಿ ಮುಂದೆ ಸಾಲಿನಲ್ಲಿ ನಿಂತಿದ್ದಾರೆ: ಅಭಿಷೇಕ್ ಬ್ಯಾನರ್ಜಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು