ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶಕ್ಕೆ ಮೋದಿ ಹೆಸರಿಡುವ ದಿನಗಳು ದೂರ ಇಲ್ಲ: ಮಮತಾ ಬ್ಯಾನರ್ಜಿ

Last Updated 8 ಮಾರ್ಚ್ 2021, 12:29 IST
ಅಕ್ಷರ ಗಾತ್ರ

ಕೋಲ್ಕತ್ತ: ಕೋವಿಡ್‌ ಲಸಿಕೆ ಹಾಕಿಸಿಕೊಂಡವರಿಗೆ ನೀಡುವ ಪ್ರಮಾಣಪತ್ರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಪ್ರಕಟಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಈ ದೇಶದ ಹೆಸರನ್ನು ನರೇಂದ್ರ ಮೋದಿ ಎಂಬುದಾಗಿ ಬದಲಾಯಿಸುವ ದಿನಗಳು ದೂರ ಇಲ್ಲ’ ಎಂದು ಕಿಡಿ ಕಾರಿದ್ದಾರೆ.

ಅಂತರರಾಷ್ಡ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕ್ರೀಡಾಂಗಣಕ್ಕೆ ಪ್ರಧಾನಿ ಹೆಸರು ಇಡಲಾಗಿದೆ. ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಅವರ ಚಿತ್ರಗಳನ್ನು ಛಾಪಿಸಲಾಗಿದೆ. ಹೀಗಾಗಿ ಈ ದೇಶಕ್ಕೆ ಅವರ ಹೆಸರು ಇಟ್ಟರೂ ಆಶ್ಚರ್ಯ ಇಲ್ಲ’ ಎಂದು ಟೀಕಿಸಿದರು.

‘ಪ್ರಧಾನಿ ಮೋದಿ ತೃಣಮೂಲ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸುಳ್ಳು ಹೇಳುವುದು, ಸರ್ಕಾರ ಕುರಿತು ದ್ವೇಷ ಹರಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಎಲ್ಲ 294 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ನನ್ನ ನಡುವೆಯೇ ಸ್ಪರ್ಧೆ ಇರಲಿದ್ದು, ನಮ್ಮ ಪಕ್ಷ ಬಹುಮತ ಪಡೆದು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ’ ಎಂದರು.

ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂಬ ಪ್ರಧಾನಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ‘ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆಯೇ? ಪ್ರಧಾನಿ ತವರು ರಾಜ್ಯ ಗುಜರಾತ್‌ನಲ್ಲಿ ಪರಿಸ್ಥಿತಿ ಹೇಗಿದೆ’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT