ಭಾನುವಾರ, ಮೇ 9, 2021
27 °C

3 ಹಂತಗಳ ಮತದಾನ ವಿಲೀನ ಅಸಾಧ್ಯ: ಚುನಾವಣಾ ಆಯೋಗ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಾಕಿ ಉಳಿದಿರುವ ಮೂರು ಹಂತಗಳ ಮತದಾನವನ್ನು ಒಂದೇ ದಿನ ನಡೆಸಬೇಕು ಎಂಬ ಟಿಎಂಸಿ ಬೇಡಿಕೆ ಜಾರಿ ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗವು ಬುಧವಾರ ಹೇಳಿದೆ. 

ಆಯೋಗವು ಟಿಎಂಸಿಗೆ ಪತ್ರ ಬರೆದು, ಕೋವಿಡ್‌ನಿಂದ ಮತದಾರರನ್ನು ರಕ್ಷಿಸುವುದಕ್ಕಾಗಿ ಕೈಗೊಂಡ ಕ್ರಮಗಳನ್ನು ವಿವರಿಸಿದೆ. ಚುನಾವಣೆಗೆ ಸಂಬಂಧಿಸಿದ ಕಾನೂನುಗಳನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಮತದಾನದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. 

ಗುರುವಾರ ಆರನೇ ಹಂತದ ಮತದಾನ ನಡೆಯಲಿದ್ದು, 26 ಮತ್ತು 29ರಂದು ಏಳು ಮತ್ತು ಎಂಟನೇ ಹಂತದ ಮತದಾನ ನಡೆಯಲಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು