ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳದ ವಿವಿಗಳಿಗೆ ರಾಜ್ಯಪಾಲರ ಬದಲಿಗೆ ಮುಖ್ಯಮಂತ್ರಿಯೇ ಕುಲಪತಿ: ಮಸೂದೆ

ಮಸೂದೆಗೆ ಪ್ರತಿಪಕ್ಷ ಬಿಜೆಪಿಯಿಂದ ತೀವ್ರ ವಿರೋಧ
Last Updated 13 ಜೂನ್ 2022, 12:59 IST
ಅಕ್ಷರ ಗಾತ್ರ

ಕೋಲ್ಕತ್ತ : ರಾಜ್ಯಪಾಲ ಜಗದೀಪ್ ಧನಖರ್‌ ಅವರ ಬದಲಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನೇಪಶ್ಚಿಮ ಬಂಗಾಳದ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಯನ್ನಾಗಿಸುವ ಮಸೂದೆಯನ್ನು ಸೋಮವಾರ ರಾಜ್ಯವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.ಪ್ರತಿಪಕ್ಷ ಬಿಜೆಪಿ ಶಾಸಕರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ರಾಜ್ಯ ಶಿಕ್ಷಣ ಸಚಿವ ಬ್ರತ್ಯಾ ಬಸು ಅವರು, ಪಶ್ಚಿಮ ಬಂಗಾಳ ವಿಶ್ವವಿದ್ಯಾನಿಲಯ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದರು. ‘ಮುಖ್ಯಮಂತ್ರಿ ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಯಾದರೆ ತಪ್ಪೇನು ಇಲ್ಲ . ರಾಜ್ಯಪಾಲರು ಹಾಗೂ ಹಾಲಿ ಕುಲಪತಿ ಸಾಕಷ್ಟು ಬಾರಿ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ’ ಎಂದು ಹೇಳಿದರು.

ವಿಧಾನಸಭೆಯ 294 ಸದಸ್ಯರ ಪೈಕಿ 182 ಮಂದಿ ಮಸೂದೆ ಪರ ಮತ ಚಲಾಯಿಸಿದೆ, 40 ಮಂದಿ ಮಸೂದೆ ವಿರುದ್ಧ ಮತ ಚಲಾಯಿಸಿದರು.

ಈ ಕುರಿತು ಪ್ರತಿಕ್ರಿಯಿಸಿರುವಬಿಜೆಪಿ ಶಾಸಕ ಅಗ್ನಿಮಿತ್ರ ಪೌಲ್‌,‘ರಾಜ್ಯ ಸರ್ಕಾರ ಎಲ್ಲವನ್ನೂ ನಿಯಂತ್ರಿಸಲು ಬಯಸುತ್ತಿದೆ.ಮುಖ್ಯಮಂತ್ರಿಯನ್ನು ಕುಲಪತಿಯಾಗಿ ನೇಮಿಸುವುದರಿಂದ ಆಡಳಿತಾರೂಢ ಪಕ್ಷ ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ನೇರವಾಗಿ ಹಸ್ತಕ್ಷೇಪ ಮಾಡಿದಂತಾಗುತ್ತದೆ’ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT